ಶಿವಮೊಗ್ಗ: ‘ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಪಾಕಿಸ್ತಾನ ಪರ ಶಿವಮೊಗ್ಗದ ವ್ಯಕ್ತಿಯೊಬ್ಬ ಅಭಿಪ್ರಾಯ ಹಂಚಿಕೊಂಡಿದ್ದಾನೆ. ಆತನ ವಿರುದ್ಧ ಎಫ್ಐಆರ್ ದಾಖಲಿಸಿ ಮಂಗಳವಾರ ಬೆಳಿಗ್ಗೆ 10 ಗಂಟೆಯೊಳಗೆ ಬಂಧಿಸಬೇಕು’ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಪೊಲೀಸರಿಗೆ ಗಡುವು ನೀಡಿದ್ದಾರೆ.

ಕೋಟೆ ಠಾಣೆ ಇನ್ಸ್ಪೆಕ್ಟರ್ ಹರೀಶ್ ಕೆ.ಪಟೇಲ್ ಅವರನ್ನು ಸೋಮವಾರ ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ಬಿಜೆಪಿ ನಿಯೋಗ ಭೇಟಿ ಮಾಡಿತು.

ನಗರದ ಟ್ಯಾಂಕ್ ಮೊಹಲ್ಲಾ ನಿವಾಸಿ ಇಬ್ಬು ಯಾನೆ ಇಬ್ರಾಹಿಮ್ ಖಾನ್ ಎಂಬಾತ ಪಾಕಿಸ್ತಾನ ಪರ ವಾಟ್ಸಾಪ್ ನಲ್ಲಿ ಅಭಿಪ್ರಾಯ ಹರಿಬಿಟ್ಟಿದ್ದಾನೆ ಎಂದು ಆರೋಪಿಸಿದ ನಿಯೋಗ, ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿತು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಚನ್ನಬಸಪ್ಪ, ಪಾಕಿಸ್ತಾನ ಪರ ಅಭಿಪ್ರಾಯ ಹಂಚಿಕೊಂಡವರ ವಿರುದ್ಧ ನಿಗದಿತ ಗಡುವಿನಲ್ಲಿ ಪೊಲೀಸರು ಬಂಧಿಸದಿದ್ದರೆ ಪೋಲಿಸ್ ಠಾಣೆ ಎದುರು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿರುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಮೋಹನ ರೆಡ್ಡಿ, ಪ್ರಮುಖರಾದ ದತ್ತಾತ್ರಿ, ದೀನ ದಾಯಳ, ಸುರೇಖಾ ಮುರಳೀಧರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.