ಶಿವಮೊಗ್ಗ: ‘ದೇಶದಲ್ಲಿ ಬಿಜೆಪಿಯವರು ಸುಳ್ಳು ಹೇಳಿಕೊಂಡೇ ಬಂದಿದ್ದಾರೆ. ಜಾತಿ, ಧರ್ಮದ ಹೆಸರಲ್ಲಿ ಒಡೆದು ಆಳುತ್ತಿದ್ದಾರೆ. ಆದರೆ, ಕಾಂಗ್ರೆಸ್ ಎಲ್ಲರನ್ನೂ ಸಹ ಒಗ್ಗೂಡಿಸಿಕೊಂಡು ಹೋಗುತ್ತಿದೆ’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ರೆಡ್ಡಿ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು ಎರಡು ವರ್ಷ ಪೂರ್ಣಗೊಂಡಿದೆ. ಕಾರ್ಯಕರ್ತರ ಶ್ರಮದ ಫಲವಾಗಿ ಪಕ್ಷ ಚುಕ್ಕಾಣಿ ಹಿಡಿದಿದೆ. ಮಹಿಳೆಯರು ಸಂಘಟನೆಯೊಂದಿಗೆ ಪಕ್ಷದ ಕೆಲಸ, ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದರು.

‘ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತೆ ಎನ್ನುವುದಕ್ಕೆ ಹೆಮ್ಮೆ ಇದೆ. ಗ್ಯಾರಂಟಿ ಯೋಜನೆಯ ಶಕ್ತಿ ಯೋಜನೆಯಿಂದ ಸ್ವಾಭಿಮಾನದಿಂದ ಮಹಿಳೆಯರು ಬಸ್ ಏರುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಮಹಿಳೆಯರು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಚುನಾವಣಾ ಪ್ರಚಾರ ಹಾಗೂ ಸರ್ಕಾರದ ಯೋಜನೆಗಳ ಬಗ್ಗೆ ಮನೆಮನೆಗೆ ತಲುಪಿಸುವ ಕಾರ್ಯ ಮಾಡಬೇಕು’ ಎಂದು ಕಾರ್ಯಕರ್ತರಿಗೆ ಸೂಚಿಸಿದರು.

‘ಗ್ಯಾರಂಟಿ ಯೋಜನೆಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗಿದೆ. ಶಿವಮೊಗ್ಗದಲ್ಲಿ ಬಿಜೆಪಿಯನ್ನು ಬುಡಸಮೇತ ಕಿತ್ತು ಹಾಕುವ ಮೂಲಕ ಕಾಂಗ್ರೆಸ್ ಅನ್ನು ಬಲಪಡಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಬಾನು ಹೇಳಿದರು.

ಶಿವಮೊಗ್ಗ ಮಹಿಳೆಯರ ಶಕ್ತಿ ಕೇಂದ್ರ. ಅಕ್ಕಮಹಾದೇವಿ, ನಾಟ್ಯರಾಣಿ ಶಾಂತಲೆ ಶಿವಮೊಗ್ಗ ಮೂಲದವರು. ಮಹಿಳೆಯರು ಅಪರಿಮಿತ ಸಾಮರ್ಥ್ಯ ಹೊಂದಿದ್ದಾರೆ. ಪಕ್ಷದ ಏಳಿಗೆಗೆ ಹೆಚ್ಚಿನದಾಗಿ ಶ್ರಮಿಸಬೇಕು ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ನುಡಿದರು.

‘ಮಹಿಳೆಯರಿಗೆ ಗ್ಯಾರಂಟಿ ಯೋಜನೆಯಡಿ ₹2000 ನೀಡಲಾಗುತ್ತಿದೆ. ಇದರ ಮಹತ್ವವನ್ನು ಮಹಿಳೆಯರಿಗೆ ತಿಳಿಯಬೇಕು. ಸರ್ಕಾರದ ಕಾರ್ಯವೈಖರಿಯನ್ನು ಎಲ್ಲ ಕಡೆ ಪಸರಿಸಬೇಕು. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇ 50ರಷ್ಟು ಮಹಿಳೆಯರಿಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಬೇಕು. ಇದರ ಜತೆಗೆ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್ ಹೇಳಿದರು.

‘ಕಾಂಗ್ರೆಸ್ ಪಕ್ಷದಿಂದ ಮಹಿಳೆಯರಿಗೆ ಶಕ್ತಿ ತುಂಬಲಾಗುತ್ತಿದೆ. ಆರ್ಥಿಕವಾಗಿ ಸದೃಢವಾಗಲು ಎಲ್ಲ ರೀತಿಯ ಸವಲತ್ತು ಕಲ್ಪಿಸಿದೆ. ಸರ್ಕಾರ ಭ್ರಷ್ಟಾಚಾರ ಮುಕ್ತ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದೆ. ಬಿಜೆಪಿ ಮಹಿಳೆಯರನ್ನು ದಾರಿ ತಪ್ಪಿಸುವ ಕಾರ್ಯ ಮಾಡುತ್ತಿದೆ’ ಎಂದು ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಹೇಳಿದರು.

ಮುಂಬರುವ ಚುನಾವಣೆಗಳಲ್ಲಿ ಮಹಿಳೆಯರು ಸಂಘಟನಾತ್ಮಕವಾಗಿ ಶ್ರಮಿಸಬೇಕು. ಪಕ್ಷವನ್ನು ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸೋಣ ಎಂದು ಕಾಂಗ್ರೆಸ್ ಜಿಲ್ಲಾ ಘಟಕ ಮಹಿಳಾ ಅಧ್ಯಕ್ಷೆ ಅನಿತಾ ಕುಮಾರಿ ಹೇಳಿದರು.

2028ರ ಲೋಕಸಭಾ ಚುನಾವಣೆಯಲ್ಲಿ ಮಹಿಳಾ ಶಕ್ತಿ ಪ್ರದರ್ಶಿಸಬೇಕಿದೆ. ಗ್ಯಾರಂಟಿ ಯೋಜನೆಗಳು ಮಹಿಳೆಯರಿಗೆ ಸ್ವಾಭಿಮಾನದ ನೆಲೆ ಕಲ್ಪಿಸಿದೆ. ಇದರಿಂದ, ಮಹಿಳಾ ಸಬಲೀಕರಣ ಆಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ರಮೇಶ್ ಹೇಳಿದರು.

ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷ ಎಸ್.ರವಿಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಪ್ರಮುಖರಾದ ಡಾ. ಶ್ರೀನಿವಾಸ ಕರಿಯಣ್ಣ, ಎಚ್.ಸಿ.ಯೋಗೀಶ್, ಎಸ್.ಪಿ.ಶೇಷಾದ್ರಿ, ಚಂದ್ರಭೂಪಾಲ್, ಕಲಿಂ ಪಾಷಾ, ಸೌಗಂಧಿಕಾ ರಘುನಾಥ, ರೇಖಾ ರಂಗನಾಥ, ಸುವರ್ಣ ನಾಗರಾಜ, ಪುಷ್ಪಾ ಶಿವಕುಮಾರ ಇದ್ದರು.

ಮಹಿಳೆಯರಿಂದ ಸದೃಢ ಅಡಳಿತ: ಮಧು ಬಂಗಾರಪ್ಪ

‘ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಮಹಿಳಾ ಸಂಘಟನೆ ಕಾರಣ. ಮಹಿಳೆಯರಿಗೆ ಅವಕಾಶ ಕೊಟ್ಟರೆ ಮಾತ್ರ ಸದೃಢ ಅಡಳಿತ ನಡೆಸಲು ಸಾಧ್ಯ’ ಸಚಿವ ಮಧು ಬಂಗಾರಪ್ಪ ಹೇಳಿದರು. ‘ದೇಶವನ್ನು ರಕ್ಷಿಸುವ ಕಾರ್ಯವನ್ನು ಕಾಂಗ್ರೆಸ್ ಮಾಡಿದೆ. ಇಂದಿರಾ ಗಾಂಧಿ ಅವರು ಹೆಣ್ಣು ಮಕ್ಕಳು ತಲೆ ಎತ್ತಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಿಸಿಕೊಟ್ಟಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.