ಶನಿವಾರ, ಸೆಪ್ಟೆಂಬರ್ 18, 2021
30 °C

ನಾವೇನೂ ಶಾಸಕರಂತೆ ಕಾಣಲ್ವಾ: ಆಯನೂರು ಮಂಜುನಾಥ್‌ ಪ್ರಶ್ನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರ ಎದುರೇ ಅವರದೇ ಪಕ್ಷದ ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅತಿವೃಷ್ಟಿ ಹಾನಿ ಪರಿಶೀಲನಾ ಸಭೆ ಮಧ್ಯೆ ಸಭಾಂಗಣಕ್ಕೆ ಬಂದ ಅವರು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ವಿರುದ್ಧ ಆಕ್ರೋಶ ಹೊರ ಹಾಕಿದರು.

ನಾವೇನು ಶಾಸಕರಲ್ಲವೇನು? ಮಷ್ಕಿರಿ ಮಾಡ್ತೀರಾ? ಜಿಲ್ಲಾಡಳಿತ ಅಥವಾ ತಾಲ್ಲೂಕು ಆಡಳಿತದ ಸಭೆಗೆ ತಮಗೆ ಆಹ್ವಾನ ನೀಡುತ್ತಿಲ್ಲ.  ಮಾಹಿತಿ‌ ನೀಡುವುದಿಲ್ಲ. ಅನುದಾನ, ಪರಿಹಾರದ ಬಗ್ಗೆ ನಮಗೆ ಮಾಹಿತಿ ಸಿಗುವುದಿಲ್ಲ. ನಾವೇನು ನಿಮಗೆ ಶಾಸಕರ ರೀತಿ ಕಾಣಿಸೋದಿಲ್ವಾ? ಎಂದು ಪ್ರಶ್ನಿಸಿದರು. ಆಯನೂರು ಮಾತಿಗೆ ಸಭೆಯಲ್ಲಿದ್ದ ಸಾಗರ ಶಾಸಕ ಹರತಾಳು ಹಾಲಪ್ಪ ಸಾಥ್ ನೀಡಿದರು. ನಂತರ ಸಚಿವ ಈಶ್ವರಪ್ಪ ಸಮಸ್ಯೆ ಇತ್ಯರ್ಥಪಡಿಸುವ ಭರವಸೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು