ಮಂಗಳವಾರ, ಆಗಸ್ಟ್ 3, 2021
21 °C

ಶೇ 70ರಷ್ಟು ಫಲಾನುಭವಿಗಳ ತಲುಪಿದ ಆತ್ಮನಿರ್ಭರ್: ಸಂಸದ ಬಿ.ವೈ.ರಾಘವೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಕೋವಿಡ್ ಸಂಕಷ್ಟ ಪರಿಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ₹20 ಲಕ್ಷ ಕೋಟಿ ಆತ್ಮನಿರ್ಭರ್ ಪ್ಯಾಕೇಜ್ ದೇಶದ ಶೇ 70ರಷ್ಟು ಫಲಾನುಭವಿಗಳಿಗೆ ತಲುಪಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ಸಣ್ಣ, ಅತಿಸಣ್ಣ ಮತ್ತು ಮಧ್ಯಮ ವರ್ಗದ ಕೈಗಾರಿಕೆಗಳು (ಎಂಎಸ್‍ಎಂಇ) ಕೇಂದ್ರ ಸರ್ಕಾರದ ನೀಡಿದ ಪ್ಯಾಕೇಜ್‌ ಲಾಭ ಪಡೆದಿವೆ. ಇದರಿಂದ ಉದ್ಯಮಿಗಳಿಗೆ  ಕೋವಿಡ್ ಸಂಕಷ್ಟದಿಂದ ಚೇತರಿಸಿಕೊಳ್ಳಲು ಸಹಕಾರಿಯಾಯಿತು. ಜಿಲ್ಲೆಯಲ್ಲೂ 32 ಬ್ಯಾಂಕ್‍ಗಳಿಂದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ 5,100 ಖಾತೆದಾರರಿಗೆ ₹107 ಕೋಟಿ ಆರ್ಥಿಕ ನೆರವು ಒದಗಿಸಲಾಗಿದೆ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

4.58.895 ಜನಧನ್ ಖಾತೆದಾರರು ಕೇಂದ್ರ ಸರ್ಕಾರದ ನೆರವು ಪಡೆದುಕೊಂಡಿದ್ದಾರೆ. ಗರೀಬ್ ಕಲ್ಯಾಣ ಯೋಜನೆ, ಉದ್ಯೋಗ ಖಾತ್ರಿ, ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ತರಬೇತಿ, ಬಂಡವಾಳ ನೆರವುಗಳ ಮೂಲಕ ಕೇಂದ್ರ ಸರ್ಕಾರ ಕೊಟ್ಟ ಭರವಸೆ ಈಡೇರಿಸಿದೆ ಎಂದು ಶ್ಲಾಘಿಸಿದರು.

ಮೆಗ್ಗಾನ್‌ ಕೋವಿಡ್‌ ಆರೈಕೆ ಕೇಂದ್ರದಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಯ ಅವ್ಯವಸ್ಥೆ ಸರಿಪಡಿಸಲಾಗುವುದು. ಸಾರ್ವಜನಿಕರು ಸೋಂಕಿತರನ್ನು ವಿರೋಧಿಸದೆ ಮಾನವೀಯ ನೆಲೆಗಟ್ಟಿನಲ್ಲಿ ನೋಡಬೇಕು. ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ, ಜಿಲ್ಲಾಡಳಿತ ಎಲ್ಲಾ ರೀತಿಯ ಕ್ರಮ ಕೈಗೊಂಡಿವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ  ಡಿ.ಎಸ್.ಅರುಣ್, ಬಿಜೆಪಿ ಮುಖಂಡರಾದ ಎಸ್.ದತ್ತಾತ್ರಿ, ಗಿರೀಶ್ ಪಟೇಲ್, ಎನ್.ಜೆ. ರಾಜಶೇಖರ್, ಜ್ಯೋತಿ ಪ್ರಕಾಶ್, ಧರ್ಮ ಪ್ರಸಾದ್, ಶಿವರಾಜ್, ಶ್ರೀನಾಥ್, ಮಾಲತೇಶ್, ಎಸ್.ಜ್ಞಾನೇಶ್ವರ್, ಕೆ.ವಿ.ಅಣ್ಣಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು