ಶಿಕಾರಿಪುರ: ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಇಲ್ಲಿನ ಇಟ್ಟಿಗೆಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಮೇಲೆ ರಾಜ್ಯ ಸರ್ಕಾರ ನೀಡುತ್ತಿದ್ದ ₹ 5 ಪ್ರೋತ್ಸಾಹ ಧನ ಕಳೆದ 7 ತಿಂಗಳಿನಿಂದ ನಿಂತುಹೋಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ತಾಲ್ಲೂಕಿನಲ್ಲಿ ಪಶು ಆಹಾರ ಘಟಕ ನಿರ್ಮಿಸಲಾಗಿದ್ದು, ಮೂಲ ಸೌಕರ್ಯಗಳ ಕೊರತೆ ಇರುವುದು ಗಮನಕ್ಕೆ ಬಂದಿದೆ. ಈ ಬಗ್ಗೆಯೂ ಪರಿಶೀಲಿಸಲಾಗುವುದು ಎಂದ ಅವರು, ಗ್ರಾಮದಲ್ಲಿ ರೈಲ್ವೆ ಮಾರ್ಗ ಹಾದು ಹೋಗಲಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಕೋರಿದರು.

ಸಂಘದ ಅಧ್ಯಕ್ಷ ಸುರೇಶ್ ಮಾತನಾಡಿದರು.

ಸಂಘದ ಕಾರ್ಯನಿರ್ವಾಹಕ ಎಚ್.ಲಕ್ಷ್ಮಣಪ್ಪಮ, ಗ್ರಾಮಪಂಚಾಯಿತಿ ಅಧ್ಯಕ್ಷೆ ಸುಶೀಲಬಾಯಿ, ಉಪಾಧ್ಯಕ್ಷ ಗಂಗಾನಾಯ್ಕ, ಸದಸ್ಯರಾದ ಸಿದ್ಧನಗೌಡ, ರೂಪ, ನಿರ್ದೇಶಕರಾದ ರುದ್ರಮ್ಮ, ಗಂಗಾಧರ, ಯೋಗೇಶ್ವರಪ್ಪ, ಪವನ, ಗಿರೀಶ್, ರಮೇಶ್, ರಾಜಶೇಖರ, ಕಿರಣ್, ಹನುಮಂತಪ್ಪ, ಗಿರಿಜಮ್ಮ, ಲಕ್ಷ್ಮಮ್ಮ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.