ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್‌ ಪ್ರಚಾರ ನಡೆಸಿದರೆ ಬಿಜೆಪಿಗೆ ಅನುಕೂಲ: ಬಿ.ವೈ.ವಿಜಯೇಂದ್ರ 

Published 27 ಏಪ್ರಿಲ್ 2024, 21:57 IST
Last Updated 27 ಏಪ್ರಿಲ್ 2024, 21:57 IST
ಅಕ್ಷರ ಗಾತ್ರ

ಶಿವಮೊಗ್ಗ: ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅಮೇಠಿ ಜನರ ವಿಶ್ವಾಸ ಕಳೆದುಕೊಂಡು ಕೇರಳದ ವಯನಾಡಿನಲ್ಲಿ ಅಡಗಿದ್ದಾರೆ. ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿತರಾಗಿರುವ ಅವರಿಗೆ ಇಂತಹ ಪರಿಸ್ಥಿತಿ ಬರಬಾರದಿತ್ತು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದರು. 

‘ರಾಹುಲ್ ಗಾಂಧಿ ಅವರನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಸಬೇಕು. ಇದರಿಂದ ಪಕ್ಷಕ್ಕೆ ಅನುಕೂಲ ಆಗಲಿದೆ. ಶಿವಮೊಗ್ಗದಲ್ಲಿ ನಮ್ಮ ಅಭ್ಯರ್ಥಿ ಎರಡೂವರೆ–ಮೂರು‌ ಲಕ್ಷ ಅಂತರದಲ್ಲಿ ಗೆಲ್ಲುವ ನಿರೀಕ್ಷೆ ಇತ್ತು. ರಾಹುಲ್ ಭೇಟಿ ಬಳಿಕ ಮತ್ತೆ 50 ಸಾವಿರ ಲೀಡ್ ಹೆಚ್ಚಲಿದೆ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

‘ಕಾಂಗ್ರೆಸ್ ಪಕ್ಷ  ಅಲ್ಪಸಂಖ್ಯಾತರ ತುಷ್ಟೀಕರಣಕ್ಕೆ ಬೆಲೆ ತೆರಬೇಕಾಗುತ್ತದೆ. ಕಾಂಗ್ರೆಸ್‌ನ ಅಲ್ಪಸಂಖ್ಯಾತರ ಓಲೈಕೆಯಿಂದ ಒಬಿಸಿ ವರ್ಗಕ್ಕೆ ಅನ್ಯಾಯ ಆಗುತ್ತಿದೆ’ ಎಂದು ಹೇಳಿದರು.

‘ಮೊದಲ ಹಂತದಲ್ಲಿ ಮತದಾನ ನಡೆದ 14 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ನಿಶ್ಚಿತ. ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಗೆದ್ದು ಪಕ್ಷ ದಾಖಲೆ ನಿರ್ಮಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT