ಭದ್ರಾವತಿ: ‘ಬಿಜೆಪಿ ಸಂಘಟನೆ ಬಲಪಡಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಾಧನೆ ಪಕ್ಷದ ಯುವ ಕಾರ್ಯಕರ್ತರಿಗೆ ಮಾದರಿ’ ಎಂದು ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ ತಿಳಿಸಿದರು.

ಚಿತ್ರದುರ್ಗದಲ್ಲಿ ಮೇ 9ರಂದು ಆಯೋಜಿಸಿರುವ ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮದ ಲೋಗೋವನ್ನು ನಗರದ ರಂಗಪ್ಪ ವೃತ್ತದಲ್ಲಿ ಶುಕ್ರವಾರ, ಪಕ್ಷದ ನಾಯಕರ ಹಾಗೂ ಕಾರ್ಯಕರ್ತರ ವಾಹನಗಳಿಗೆ ಅಂಟಿಸಿ ಅವರು ಮಾತನಾಡಿದರು.

‘ಹೋರಾಟದ ಮೂಲಕ ಅಧಿಕಾರದ ಗದ್ದುಗೆ ಹಿಡಿದ ಯಡಿಯೂರಪ್ಪನವರು, ಮುಖ್ಯಮಂತ್ರಿಯಾದ ಬಳಿಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಹಾಗೂ ಶೋಷಿತರ ಕಲ್ಯಾಣಕ್ಕೆ ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡರು. ಮೇ 9ರ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ. ಕಾರ್ಯಕ್ರಮ ಪಕ್ಷದ ಸಂಘಟನೆಗೆ ಇನ್ನಷ್ಟು ಬಲ ನೀಡಲಿದೆ’ ಎಂದರು.

ಬಿಜೆಪಿ ನಗರ ಘಟಕದ ಅಧ್ಯಕ್ಷ ಧರ್ಮಪ್ರಸಾದ್ ಜಿ, ಗ್ರಾಮಾಂತರ ಘಟಕದ ಅಧ್ಯಕ್ಷ ಕೆ.ಎಚ್. ತೀರ್ಥಯ್ಯ, ನಾಯಕರಾದ ಮಂಗೋಟೆ ರುದ್ರೇಶ್, ಆನಂದ ಕುಮಾರ್ ಜಿ, ಕೂಡ್ಲಿಗೆರೆ ಹಾಲೇಶ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-42-1593600336

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.