ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವರ್ಷಕ್ಕೆ ಮೂರು ಬಾರಿ ರಕ್ತದಾನ ಮಾಡಿ’

Published 17 ಆಗಸ್ಟ್ 2023, 12:56 IST
Last Updated 17 ಆಗಸ್ಟ್ 2023, 12:56 IST
ಅಕ್ಷರ ಗಾತ್ರ

ಸಾಗರ: ‘ವರ್ಷಕ್ಕೆ ಮೂರು ಬಾರಿ ರಕ್ತದಾನ ಮಾಡುವುದರಿಂದ ನಮ್ಮ ಆರೋಗ್ಯ ಸುಧಾರಿಸುತ್ತದೆ. ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಲು ಹಿಂಜರಿಯಬಾರದು’ ಎಂದು ರೋಟರಿ ಸಂಸ್ಥೆ ಅಧ್ಯಕ್ಷೆ ಡಾ.ರಾಜನಂದಿನಿ ಕಾಗೋಡು ಹೇಳಿದರು.

ಇಲ್ಲಿನ ರೋಟರಿ ರಕ್ತನಿಧಿ ಕೇಂದ್ರದಲ್ಲಿ ಭಾರತ್ ಸಂಕಲ್ಪ ದಿವಸ್ ಅಂಗವಾಗಿ ಮಂಗಳವಾರ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗ ದಳ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡಿದವರಿಗೆ ಪ್ರಮಾಣಪತ್ರ ವಿತರಿಸಿ ಅವರು ಮಾತನಾಡಿದರು.

‘ಮಹಿಳೆಯರು ರಕ್ತದಾನ ಮಾಡಿದರೆ ಆರೋಗ್ಯಕ್ಕೆ ತೊಂದರೆಯಾಗುತ್ತದೆ ಎಂಬ ತಪ್ಪು ಕಲ್ಪನೆ ಇದೆ. ನಾನು ಸ್ವತಃ ವೈದ್ಯೆಯಾಗಿ ವರ್ಷದಲ್ಲಿ ನಾಲ್ಕು ಬಾರಿ ರಕ್ತದಾನ ಮಾಡುತ್ತೇನೆ. ನಾವು ಮಾಡುವ ರಕ್ತದಾನ ಮತ್ತೊಬ್ಬರ ಜೀವ ಉಳಿಸುವ ಕಾರ್ಯಕ್ಕೆ ನೆರವಾಗುತ್ತದೆ ಎಂಬುದನ್ನು ಮರೆಯಬಾರದು’ ಎಂದರು.

ಲೆಕ್ಕ ಪರಿಶೋಧಕ ಬಿ.ವಿ.ರವೀಂದ್ರನಾಥ್, ಪ್ರಮುಖರಾದ ಪ್ರತಿಮಾ ಜೋಗಿ, ಸಂತೋಷ್ ಶಿವಾಜಿ, ಎಚ್.ಎಂ.ಶಿವಕುಮಾರ್, ಪ್ರಜೀತ್, ರವೀಶ್ ಕುಮಾರ್, ಅಮೃತಾ, ಉಮಾ, ಪುಷ್ಪಾ ಪೈ, ಮಂಜು ಗೌಡ, ಕಿರಣ್ ಗೌಡ, ನವೀನ್ ಯಳವರಸಿ, ಶ್ವೇತಾ ಅನಿಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT