ಸಾಗರ: ಯಾರಿಗೆ ಯಾವ ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಬೀಳುತ್ತದೆ ಎಂದು ಹೇಳಲಾಗದು. ರಕ್ತದ ಕೊರತೆಯನ್ನು ನೀಗಿಸಲು ಶುಭ ಸಮಾರಂಭಗಳಲ್ಲೂ ರಕ್ತದಾನ ಶಿಬಿರ ಆಯೋಜಿಸುವ ಸಮಾಜಮುಖಿ ಧೋರಣೆ ಬೆಳೆಯಬೇಕು ಎಂದು ರೋಟರಿ ರೆಡ್ ಕ್ರಾಸ್ ರಕ್ತನಿಧಿ ಕೇಂದ್ರದ ಅಧ್ಯಕ್ಷ ಎಚ್.ಎಂ.ಶಿವಕುಮಾರ್ ಹೇಳಿದರು.

ಇಲ್ಲಿನ ರೋಟರಿ ರಕ್ತನಿಧಿ ಕೇಂದ್ರದಲ್ಲಿ ಎಲ್ ಬಿ ಮತ್ತು ಎಸ್ ಬಿಎಸ್ ಕಾಲೇಜು ವತಿಯಿಂದ ಶನಿವಾರ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡಿದವರಿಗೆ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡಿದರು.

ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡುವುದರಿಂದ ಆರೋಗ್ಯಕ್ಕೆ ಯಾವುದೆ ತೊಂದರೆ ಇಲ್ಲ. ಆದಾಗ್ಯೂ ಆರೋಗ್ಯವಂತರು ಕೂಡ ರಕ್ತದಾನ ಮಾಡಲು ಹಿಂಜರಿಕೆ ಮನೋಭಾವ ತೋರುವುದು ಸರಿಯಲ್ಲ. ರಕ್ತದಾನಿಗಳ ಸಂಖ್ಯೆ ಹೆಚ್ಚಾದಾಗ ಮಾತ್ರ ರಕ್ತನಿಧಿ ಕೇಂದ್ರ ಸುಲಲಿತವಾಗಿ ಕಾರ್ಯ ನಿರ್ವಹಿಸಬಹುದು ಎಂದರು.

ರೋಟರಿ ರಕ್ತನಿಧಿ ಕೇಂದ್ರದ ಡಾ.ಬಿ.ಜಿ.ಸಂಗಮ್, ಎಂ.ಕೆ.ಶಾಂತಕುಮಾರ್, ಎಲ್ ಬಿ ಕಾಲೇಜಿನ ಎನ್ ಸಿಸಿ ಅಧಿಕಾರಿ ನೂತನ್ ಹಂದಿಗೋಡು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.