ಶುಕ್ರವಾರ, ಅಕ್ಟೋಬರ್ 7, 2022
25 °C

ಕ್ರೀಡೆಯಿಂದ ದೇಹ, ಮನಸ್ಸು ಸದೃಢ: ಕೆ.ಬಿ. ಪ್ರಸನ್ನಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಕ್ರೀಡೆಯಿಂದ ದೇಹ, ಮನಸ್ಸು ಸದೃಢವಾಗುವುದರ ಜೊತೆಗೆ ಖಿನ್ನತೆ ದೂರವಾಗುತ್ತದೆ. ಬಾಲ್ಯದಲ್ಲೇ ಮಕ್ಕಳಿಗೆ ಕ್ರೀಡೆ ಬಗ್ಗೆ ಆಸಕ್ತಿಯನ್ನು ಬೆಳಸಬೇಕು ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಹೇಳಿದರು.

ನಗರದ ರೋವರ್ಸ್ ಕ್ಲಬ್ ಆವರಣದಲ್ಲಿ ಶನಿವಾರ ಸ್ನೇಹಮಹಿ ಸಂಘದಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಅಂತರ ಜಿಲ್ಲಾ  ಓಪನ್ ಬ್ಯಾಡ್ಮಿಂಟನ್ ಕಪ್ ಟೂರ್ನಿ ಉದ್ಘಾಟಿಸಿ ಅವರು ಮಾತನಾಡಿದರು.

‘ರೋವರ್ಸ್ ಕ್ಲಬ್ ಈಗಾಗಲೇ ಇಂತಹ ಕ್ರೀಡೆಗಳಿಗೆ ಸಹಕಾರ ನೀಡುತ್ತಾ ಬಂದಿದೆ. ಕ್ರೀಡೆ ಒಳ್ಳೆಯ ವಾತಾವರಣವನ್ನು ಸೃಷ್ಟಿ ಮಾಡುತ್ತದೆ. ಈಗಾಗಲೇ ಜಿಲ್ಲೆಯ ಸಾಕಷ್ಟು ಕ್ರೀಡಾಪಟುಗಳಿಗೆ ಸಹಕಾರ ನೀಡಿ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಭಾಗವಹಿಸಲು ಸಹಕಾರ ನೀಡಿದ್ದೇವೆ’ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್ ಹೇಳಿದರು.

ಕ್ರೀಡೆಯಿಂದ ವರ್ಷ ಕಾಮನ್ ವೆಲ್ತ್ ನಲ್ಲಿ ರಾಜ್ಯ ಹಾಗೂ ದೇಶದವರು ಅತಿ ಹೆಚ್ಚು ಪದಕಗಳನ್ನು ಗಳಿಸಿರುವುದು ಹೆಮ್ಮೆಯ ಸಂಗತಿ ಎಂದು  ಜಿಲ್ಲಾ ಸ್ಕೌಟ್ಸ್ ಗೈಡ್ಸ್ ಮುಖ್ಯ ಆಯುಕ್ತ ಎಚ್.ಡಿ. ರಮೇಶ್ ಶಾಸ್ತ್ರಿ ಹೇಳಿದರು.

ಸಂಘದ ಅಧ್ಯಕ್ಷ ಎಸ್. ಚಿನ್ನಪ್ಪ ಅಧ್ಯಕ್ಷತೆ ವಹಿಸಿದ್ದರು. ಉಪ ಮೇಯರ್ ಶಂಕರ್ ಗನ್ನಿ, ರೋವರ್ಸ್ ಕ್ಲಬ್‌ನ ಉಪಾಧ್ಯಕ್ಷ ಕೆ. ರವಿ, ಖಜಾಂಚಿ ನಾಗರಾಜ್ ಪಾಟ್ಕರ್, ಜಿ. ವಿಜಯಕುಮಾರ್, ಎನ್. ರವಿಕುಮಾರ್, ಆ.ಮ. ಪ್ರಕಾಶ್, ವಿನಾಯಕ, ರಾಮು, ಎಂ.ಆರ್. ಬಸವರಾಜ್, ಸಹ ಕಾರ್ಯದರ್ಶಿ ಕೃಷ್ಣಣ್ಣ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು