ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಸೊರಬ: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು

Published 27 ಮೇ 2024, 15:37 IST
Last Updated 27 ಮೇ 2024, 15:37 IST
ಅಕ್ಷರ ಗಾತ್ರ

ಸೊರಬ: ದನ ಮೇಯಿಸಲು ಹೋಗಿದ್ದ ತಾಲ್ಲೂಕಿನ ಕ್ಯಾಸನೂರು ಗ್ರಾಮದ ಬಾಲಕ ಸಾತ್ವಿಕ್ (14) ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.

ಗ್ರಾಮದ ಸುರೇಶ್ ಅವರ ಪುತ್ರ ಸಾತ್ವಿಕ್ ಶಾಲೆಗೆ ರಜೆ ಇರುವ ಕಾರಣ ದನ ಮೇಯಿಸಲು ಹೋಗಿದ್ದ. ಅದೇ ಗ್ರಾಮದ ಫಾತೀಮ ಅವರ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ. ಬಾಲಕನ ಪೋಷಕರ ಆಕ್ರಂದನ ಮುಗಿಲು ಮುಟ್ಟುವಂತಿತ್ತು. ಗ್ರಾಮದಲ್ಲಿ ಸೂತಕದ ವಾತಾವರಣ ಆವರಿಸಿತ್ತು.

ಅಗ್ನಿಶಾಮಕ ದಳದ ಅಧಿಕಾರಿ ಮಹಾಬಲೇಶ್ವರ ನಾಯ್ಕ ನೇತೃತ್ವದಲ್ಲಿ ಸಿಬ್ಬಂದಿ ಶವ ಮೇಲೆತ್ತಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT