ಸೋಮವಾರ, 2 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೀರ್ಥಹಳ್ಳಿ: ಈಜಲು ತೆರಳಿದ್ದ ಇಬ್ಬರು ಯುವಕರು ತುಂಗಾ ನದಿಯಲ್ಲಿ ನಾಪತ್ತೆ

Published 10 ಸೆಪ್ಟೆಂಬರ್ 2023, 14:36 IST
Last Updated 10 ಸೆಪ್ಟೆಂಬರ್ 2023, 14:36 IST
ಅಕ್ಷರ ಗಾತ್ರ

ತೀರ್ಥಹಳ್ಳಿ: ಭೀಮನಕಟ್ಟೆ ಸಮೀಪದ ತುಂಗಾ ನದಿಯಲ್ಲಿ ಭಾನುವಾರ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ.

ಬೆಂಗಳೂರಿನ ಮಾಗಡಿಯ ಗೌತಮ್ (28) ಹಾಗೂ ಸುಜಯ (26) ನೀರಿನಲ್ಲಿ ಕಣ್ಮರೆಯಾದವರು. ಸ್ನೇಹಿತ ಗಿರೀಶ್‌ಗೆ ಈಜು ಬಾರದ ಕಾರಣ ನೀರಿಗೆ ಇಳಿದಿರಲಿಲ್ಲ. ಕಮ್ಮರಡಿಯಲ್ಲಿರುವ ಸ್ನೇಹಿತನ ಮನೆಗೆ ಮೂವರೂ ಭೇಟಿ ನೀಡಿ ತಾಲ್ಲೂಕಿನ ಪ್ರವಾಸದಲ್ಲಿದ್ದರು.

ಗೌತಮ್ ಅವರ ತಾಯಿ ಮಧ್ಯಪ್ರದೇಶದ ಧಾರ್ಮಿಕ ಕೇಂದ್ರಗಳಿಗೆ ಪ್ರವಾಸ ತೆರಳಿದ್ದರು. ವಿಷಯ ತಿಳಿಯುತ್ತಿದ್ದಂತೆ ವಿಮಾನದಲ್ಲಿ ಬೆಂಗಳೂರಿಗೆ ಹಿಂತಿರುಗಿದ್ದಾರೆ. ಯುವಕರಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧಕಾರ್ಯ ನಡೆಸುತ್ತಿದ್ದಾರೆ. ನೀರಿನ ಮಟ್ಟ ಹೆಚ್ಚಾಗಿರುವ ಕಾರಣ ಕಾರ್ಯಾಚರಣೆಗೆ ತೊಡಕಾಗಿದೆ.

ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT