ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ವಿಮಾನ ನಿಲ್ದಾಣಕ್ಕೆ ಅಂಬೇಡ್ಕರ್ ಹೆಸರು ಬಳಕೆಗೆ ಒತ್ತಾಯ

Last Updated 6 ಮೇ 2022, 4:30 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಡಾ.ಬಿ.ಆರ್‌. ಅಂಬೇಡ್ಕರ್ ಅವರ ಹೆಸರು ಇಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಚಾಣಕ್ಯ ಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.

ವಿಮಾನ ನಿಲ್ದಾಣದ ಆವರಣದಲ್ಲಿ ಅಂಬೇಡ್ಕರ್ ಅವರ 105 ಅಡಿ ಎತ್ತರದ ಪ್ರತಿಮೆ ಸ್ಥಾಪಿಸಬೇಕು. ರಾಜ್ಯದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಹೆಸರಿನ ಬದಲಿಗೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಹೆಸರು ನಮೂದಿಸಬೇಕು. ಇಲಾಖೆಯ ಎಲ್ಲಾ ವಿದ್ಯಾರ್ಥಿನಿಲಯಗಳಿಗೆ ಅಂಬೇಡ್ಕರ್ ಹೆಸರು ಇಡಬೇಕು. ಎಲ್ಲಾ ಪರಿಶಿಷ್ಟ ಜಾತಿ ಅಭಿವೃದ್ಧಿ ನಿಗಮಗಳಿಗೆ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಎಂದು ನಾಮಕರಣ ಮಾಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು. ಸಂಘಟನೆಯ ಮುಖಂಡರಾದ ನಾರಾಯಣ ಐಹೊಳೆ, ಲೋಕೇಶ್, ಪ್ರಭು, ನಾಗರಾಜ್, ಜಯಲಕ್ಷ್ಮಿ, ತಂಗಮ್ಮ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT