ಶಿವಮೊಗ್ಗ: ಜುಲೈ 14ರಂದು ಲೋಕಾರ್ಪಣೆಗೊಳ್ಳಲಿರುವ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವಿನ ನೂತನ ತೂಗು ಸೇತುವೆಯ ಎರಡನೇ ಹಂತದ ಲೋಡ್ ಟೆಸ್ಟ್ ಶನಿವಾರ ಆರಂಭವಾಗಿದೆ. ಕೊನೆಯ ಹಂತದಲ್ಲಿ ಸಣ್ಣ ಪುಟ್ಟ ಕೆಲಸ ಕಾರ್ಯ ಬಾಕಿ ಇದ್ದು, ಶೀಘ್ರ ಮುಗಿಯಲಿವೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೇತುವೆ ಲೋಕಾರ್ಪಣೆ ಕಾರ್ಯಕ್ರಮದ ಸ್ಥಳ ಹಾಗೂ ಸಮಯ ಇನ್ನಷ್ಟೇ ನಿಗದಿಯಾಗಬೇಕಿದೆ ಎಂದರು.

‘ಸೇತುವೆ ನಿರ್ಮಾಣಕ್ಕೆ ಪಕ್ಷಾತೀತವಾಗಿ ಹೋರಾಟ ನಡೆದಿವೆ. ಆದರೆ ಅದರ ನಿರ್ಮಾಣಕ್ಕೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ ಕೊಡುಗೆ ಮಹತ್ವದ್ದು. ಆರಂಭದಲ್ಲಿ ಈ ಕಾರ್ಯಕ್ಕೆ ಯಡಿಯೂರಪ್ಪ ₹100 ಕೋಟಿ ಕೊಟ್ಟಿದ್ದರು. ಜೊತೆಗೆ ಸೇತುವೆ ನಿರ್ಮಾಣಕ್ಕೆ ಮೀಸಲಿಟ್ಟಿದ್ದ ಹಣವನ್ನು ಮಧ್ಯದಲ್ಲಿ ಬೇರೆ ಕಡೆ ವಿನಿಯೋಗಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿತ್ತು. ಆ ವೇಳೆ ನಿತಿನ್ ಗಡ್ಕರಿ ಅವರಿಗೆ ದುಂಬಾಲು ಬಿದ್ದು ಆ ಹಣವನ್ನು ವಾಪಸ್ ತರಿಸುವಲ್ಲಿ ಯಡಿಯೂರಪ್ಪ ಶ್ರಮ ಹಾಕಿದ್ದರು’ ಎಂದು ಸ್ಮರಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಕೆ.ಜಗದೀಶ್, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್.ಚನ್ನಬಸಪ್ಪ, ಡಾ.ಧನಂಜಯ ಸರ್ಜಿ, ಮಾಜಿ ಸಚಿವ ಹರತಾಳು ಹಾಲಪ್ಪ, ಮಾಜಿ ಶಾಸಕರಾದ ಅಶೋಕ ನಾಯ್ಕ, ಕೆ.ಜಿ. ಕುಮಾರ್ಸ್ವಾಮಿ, ಆರ್.ಕೆ. ಸಿದ್ರಾಮಣ್ಣ, ಮುಖಂಡರಾದ ಎಸ್.ದತ್ತಾತ್ರಿ, ಟಿ.ಡಿ.ಮೇಘರಾಜ್, ಸಿ.ಎಚ್. ಮಾಲತೇಶ್, ಹರಿಕೃಷ್ಣ, ವಿನ್ಸೆಂಟ್ ರೋಡ್ರಿಗಸ್, ಚಂದ್ರಶೇಖರ್, ಕೆ.ವಿ. ಅಣ್ಣಪ್ಪ, ರಾಮು ಹಾಜರಿದ್ದರು.

Quote - ಶರಾವತಿ ಸಂತ್ರಸ್ತರ ಅನುಕೂಲಕ್ಕಾಗಿ ಸಿಗಂದೂರು ಪಟಗುಪ್ಪ ಹಸಿರುಮಕ್ಕಿ ಸೇರಿದಂತೆ ಮಲೆನಾಡಿನಲ್ಲಿ 6 ಸೇತುವೆಗಳ ನಿರ್ಮಾಣ ಕಾರ್ಯವನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭಿಸಲಾಗಿತ್ತು ಬಿ.ವೈ.ರಾಘವೇಂದ್ರ ಶಿವಮೊಗ್ಗ ಸಂಸದ

₹20,000 ಕೋಟಿ ತಂದಿದ್ದೇನೆ: ಬಿವೈಆರ್ ತಿರುಗೇಟು

‘ಸೇತುವೆ ನಿರ್ಮಾಣಕ್ಕೆ ನಮ್ಮ ಅಪ್ಪನ ಮನೆಯಿಂದ ಹಣ ತಂದಿಲ್ಲ. ಅದು ಜನರ ತೆರಿಗೆ ದುಡ್ಡು ಎಂದು ಕಾಂಗ್ರೆಸ್ನವರು ನೆನಪಿಸಿದ್ದಾರೆ. ಹಾಗಿದ್ದರೆ ಇದೇ ಕೆಲಸ 2008ರಲ್ಲಿ ಯಡಿಯೂರಪ್ಪ ಉಪಮುಖ್ಯಮಂತ್ರಿ ಆಗುವುದಕ್ಕೆ ಮುನ್ನ ಏಕೆ ಆಗಿರಲಿಲ್ಲ’ ಎಂದು ಬಿ.ವೈ.ರಾಘವೇಂದ್ರ ಪ್ರಶ್ನಿಸಿದರು.

‘ಮಲೆನಾಡಿನ ಜನರು ಅಡಿಕೆ ಬೆಳೆದು ಕಟ್ಟುತ್ತಿರುವ ತೆರಿಗೆಯನ್ನು ಕೇಂದ್ರ ಸರ್ಕಾರ ಇಲ್ಲಿನ ಅಭಿವೃದ್ಧಿಗೆ ವಾಪಸ್ ಕೊಡಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದಾರೆ. ನನ್ನ ಅವಧಿಯಲ್ಲಿ ₹20000 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಶಿವಮೊಗ್ಗ ಕ್ಷೇತ್ರಕ್ಕೆ ತಂದಿದ್ದೇನೆ ಎಂಬುದನ್ನು ಅವರಿಗೆ ನೆನಪಿಸುತ್ತೇನೆ’ ಎಂದು ತಿರುಗೇಟು ನೀಡಿದರು.

ಸೇತುವೆ ನಿರ್ಮಾಣದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನೀಡಿರುವ ಸಹಕಾರ ಸ್ಮರಿಸುತ್ತೇವೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.