ಮಂಗಳವಾರ, ಡಿಸೆಂಬರ್ 7, 2021
20 °C

ಸಹೋದರರ ಕಲಹ: ಕೊಲೆ ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾಗರ: ತಾಲ್ಲೂಕಿನ ಅಂದಾಸುರ ಗ್ರಾಮದಲ್ಲಿ ಸಹೋದರರ ನಡುವೆ ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದು ಸುರೇಶ್ (24) ಎಂಬ ವ್ಯಕ್ತಿ ಮೃತಪಟ್ಟ ಪ್ರಕರಣದಲ್ಲಿ ಆತನ ಸಹೋದರ ಗಿರೀಶ್ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಮೇ 6ರಂದು ಸಹೋದರರ ನಡುವೆ ನಡೆದ ಕಲಹದಲ್ಲಿ ಸುರೇಶ್ ವಿಷ ಸೇವಿಸಿದ್ದರು. ಅಲ್ಲದೇ ಗಿರೀಶ್ ಅವರು ಸುರೇಶ್ ಮೇಲೆ ರಾಡ್‌ನಿಂದ ಹಲ್ಲೆ ಕೂಡ ನಡೆಸಿದ್ದರು. ಯಾವ ಕಾರಣಕ್ಕೆ ಸುರೇಶ್ ಅವರ ಸಾವು ಸಂಭವಿಸಿದೆ ಎನ್ನುವ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದರು.

ತನಿಖೆ ಸಂದರ್ಭದಲ್ಲಿ ಸುರೇಶ್ ಅವರು ಗಿರೀಶ್ ನಡೆಸಿದ ಹಲ್ಲೆಯಿಂದಲೇ ಸಾವನ್ನಪ್ಪಿರುವುದು ದೃಢಪಟ್ಟಿರುವುದರಿಂದ ಪೊಲೀಸರು ಗಿರೀಶ್ ವಿರುದ್ಧ ಪ್ರಕರಣ ದಾಖಲಿಸಿದ್ದು, ಅವರನ್ನು ಬಂಧಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.