ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

ಭಾಗ್ಯಲಕ್ಷ್ಮಿ ಬಾಂಡ್ ಹಣ ಕೊಡಿ: ಬಿಎಸ್‌ವೈ

Published : 29 ಅಕ್ಟೋಬರ್ 2024, 16:12 IST
Last Updated : 29 ಅಕ್ಟೋಬರ್ 2024, 16:12 IST
ಫಾಲೋ ಮಾಡಿ
0
ಭಾಗ್ಯಲಕ್ಷ್ಮಿ ಬಾಂಡ್ ಹಣ ಕೊಡಿ: ಬಿಎಸ್‌ವೈ
ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗ: ಭಾಗ್ಯಲಕ್ಷ್ಮಿ ಯೋಜನೆಯಡಿ 18 ವರ್ಷದ ಫಲಾನುಭವಿಗಳಿಗೆ ನೆಪ ಹೇಳದೇ ಹಣ ಕೊಡಿ ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ (ಬಿಎಸ್‌ವೈ) ಆಗ್ರಹಿಸಿದ್ದಾರೆ.

ADVERTISEMENT
ADVERTISEMENT

‘ರಾಜ್ಯದ ಬಡ ಹೆಣ್ಣುಮಕ್ಕಳ ಬಾಳಿಗೆ ಬೆಳಕಾಗುವ ಉದ್ದೇಶದಿಂದ ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದ ವೇಳೆ ಭಾಗ್ಯಲಕ್ಷ್ಮಿ ಯೋಜನೆ ಜಾರಿಗೊಳಿಸಿದ್ದೆ. ಈಗ ಅದರ ಅನುಷ್ಠಾನದ ವಿಚಾರದಲ್ಲಿ ಸರ್ಕಾರ ಮೀನ–ಮೇಷ ಎಣಿಸುತ್ತಿದೆ’ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಸರ್ಕಾರ ತಂದೆ–ತಾಯಿ ಇಬ್ಬರೂ ಮೃತಪಟ್ಟ ಕುಟುಂಬಗಳ ಹೆಣ್ಣು ಮಕ್ಕಳ ಪರಿಸ್ಥಿತಿಯನ್ನು ಸೂಕ್ಷ್ಮತೆ, ಮಾನವೀಯತೆಯಿಂದ ಪರಿಗಣಿಸಲಿ. ಮೊದಲು ಭಾಗ್ಯಲಕ್ಷ್ಮಿ ಬಾಂಡ್ ಪಡೆದ ಫಲಾನುಭವಿಗಳಿಗೆ ಹಣ ಕೊಡಲಿ ಎಂದಿದ್ದಾರೆ.

ಭಾಗ್ಯಲಕ್ಷ್ಮಿ ಬಾಂಡ್ ಪಡೆದ ಫಲಾನುಭವಿಗೆ 18 ವರ್ಷ ತುಂಬಿದರೂ ಅವರ ಬ್ಯಾಂಕ್ ಖಾತೆಗೆ ₹1 ಲಕ್ಷ ಜಮೆ ಆಗಿಲ್ಲ. ರಾಜ್ಯದಲ್ಲಿ 34.50 ಲಕ್ಷ ಭಾಗ್ಯಲಕ್ಷ್ಮಿ ಫಲಾನುಭವಿಗಳಿದ್ದಾರೆ. ಹೆಣ್ಣುಮಕ್ಕಳ ಉನ್ನತ ವ್ಯಾಸಂಗ ಸೇರಿದಂತೆ ಇತರೆ ಕಾರ್ಯಗಳಿಗೆ ಆ ಹಣ ನೆರವಾಗುತ್ತದೆ ಎಂದರು.

ADVERTISEMENT

ರಾಜ್ಯ ಸರ್ಕಾರ ಉದ್ದೇಶಪೂರ್ವಕವಾಗಿ ನೀಡಿದ ಸೂಚನೆ ಮೇರೆಗೆ ಕಠಿಣ ತಾಂತ್ರಿಕ ಷರತ್ತುಗಳ ದಾಖಲೆ ನೀಡುವಂತೆ ಫಲಾನುಭವಿಗಳಿಗೆ ಸಂಬಂಧಿಸಿದ ಇಲಾಖೆ ಹೇಳಿದೆ. ಬಾಂಡ್ ಅವಧಿ ಪೂರ್ಣಗೊಂಡರೂ ಹಲವು ಫಲಾನುಭವಿಗಳಿಗೆ ಇನ್ನೂ ಮಾಹಿತಿ ತಲುಪಿಲ್ಲ. ಮಾಹಿತಿ ಇರುವವರನ್ನೂ ದಾಖಲೆ ಸಲ್ಲಿಸಲು ಸರ್ಕಾರಿ ಕಚೇರಿಗಳಿಗೆ ಅಲೆದಾಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮೊದಲು ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಅರ್ಹ ನೆರವು ನೀಡಬೇಕು. ಯೋಜನೆಯನ್ನು ಮತ್ತೆ ಜಾರಿ ಮಾಡಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
Comments0