ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘₹ 4,636 ಕೋಟಿ ವೆಚ್ಚದಲ್ಲಿ ಐಟಿಐ ಉನ್ನತೀಕರಣ’

Last Updated 17 ಫೆಬ್ರುವರಿ 2021, 21:46 IST
ಅಕ್ಷರ ಗಾತ್ರ

ಶಿವಮೊಗ್ಗ: ರಾಜ್ಯದ ಕೈಗಾರಿಕಾ ತರಬೇತಿ ಕೇಂದ್ರಗಳನ್ನು (ಐಟಿಐ) ಟಾಟಾ ಟೆಕ್ನಾಲಜಿ ಸಂಸ್ಥೆಯ ಸಹಯೋಗದಲ್ಲಿ ₹ 4,636 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಹೇಳಿದರು.

ನಗರದಲ್ಲಿ ಅವರು ಬುಧವಾರ ಸುದ್ದಿಗಾರರ ಜತೆಮಾತನಾಡಿದರು.

‘ಐಟಿಐಗಳನ್ನೂ ಉನ್ನತೀಕರಿಸುವ ಮೂಲಕ ಯುವಜನರಿಗೆ ಹೆಚ್ಚಿನ ಕೌಶಲ ಒದಗಿಸಲಾಗುತ್ತಿದೆ. ಸರ್ಕಾರದ 2020–21ರ ಕೈಗಾರಿಕಾ ನೀತಿಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿಸುವ ಕೈಗಾರಿಕೆಗಳಿಗೆ ವಿಶೇಷ ಪ್ರೋತ್ಸಾಹ ದೊರಕಲಿದೆ. ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗುತ್ತಿದೆ. ರಸ್ತೆ, ನೀರು ಪೂರೈಕೆ, ವಿದ್ಯುತ್ ಮತ್ತಿತರ ಸೌಲಭ್ಯಗಳನ್ನು ತ್ವರಿತಗತಿಯಲ್ಲಿ ಒದಗಿಸಲಾಗುತ್ತಿದೆ. ಬಂಡವಾಳ ಹೂಡಿಕೆಗೆ ಉತ್ತೇಜನ ನೀಡಲಾಗುತ್ತಿದೆ. ಪ್ರಸ್ತುತ ಕೈಗಾರಿಕಾ ಹೂಡಿಕೆಯಲ್ಲಿ ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ’ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT