ಶಿಕಾರಿಪುರ:2023ರ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಪುತ್ರ ಬಿ.ವೈ. ವಿಜಯೇಂದ್ರ ಸ್ಪರ್ಧೆ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟ ಪಡಿಸಿದರು.

ತಾಲ್ಲೂಕಿನ ಆಂಜನಾಪುರ ಜಲಾಶಯಕ್ಕೆ ಶುಕ್ರವಾರ ಬಾಗಿನ ಅರ್ಪಿಸಿದ ನಂತರ ಅವರು ಮಾತನಾಡಿದರು.

ಈ ಕ್ಷೇತ್ರದ ಜನತೆ ನನಗಿಂತ ಹೆಚ್ಚಿನ ಮತಗಳ ಅಂತರದಲ್ಲಿ ಬಿ.ವೈ. ವಿಜಯೇಂದ್ರ ಅವರನ್ನು ಗೆಲ್ಲಿಸಬೇಕು ಎಂದು ವಿನಂತಿಸುತ್ತೇನೆ ಎಂದರು.

ಪುತ್ರ ವಿಜಯೇಂದ್ರ ತಾಲ್ಲೂಕಿನಲ್ಲಿಯೇ ಹೋರಾಟ ಮಾಡಬೇಕೆಂಬ ಅಪೇಕ್ಷೆ ನನಗೆ ಇದೆ. ಮುಂದಿನ ದಿನಗಳಲ್ಲಿ ಸಂಸದ ರಾಘವೇಂದ್ರ ಜತೆ ತಾಲ್ಲೂಕಿನಲ್ಲಿ ವಿಜಯೇಂದ್ರ ಹೋರಾಟ ಮಾಡುತ್ತಾನೆ. ಅವನಿಗೂ ನಿಮ್ಮ ಆಶೀರ್ವಾದ ಇರಬೇಕು ಎಂದು ನಿಮ್ಮಲ್ಲಿ ಕೈಜೋಡಿಸಿ ಪ್ರಾರ್ಥನೆ ಮಾಡುತ್ತೇನೆ ಎಂದು ಯಡಿಯೂರಪ್ಪ ಅವರುಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ನಡೆದ ಸ್ವಸಹಾಯ ಸಂಘದ ಮಹಿಳೆಯರಿಗೆ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.