ಬೆಂಗಳೂರು: ನೆಟ್ವರ್ಕ್ ಸಮಸ್ಯೆ ಹಾಗೂ ಕೋವಿಡ್ ವರದಿಗೆ ಸಂಬಂಧಿಸಿದ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಸೂಕ್ತ ಸಮಯದಲ್ಲಿ ಇ-ಮೇಲ್ ಕಳುಹಿಸಲು ಸಾಧ್ಯವಾಗದ ಕಾರಣ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಗೆ (ನೀಟ್) ಗೈರಾಗುವ ಆತಂಕದಲ್ಲಿದ್ದ ವಿದ್ಯಾರ್ಥಿನಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಧ್ಯಪ್ರವೇಶದಿಂದ ಪರೀಕ್ಷೆ ಬರೆದಿದ್ದಾಳೆ.

ಶಿವಮೊಗ್ಗದ ನವೋದಯ ಶಾಲೆಯ ತನುಜಾಕಳೆದ ವರ್ಷ ಪಿಯುಸಿ ಪೂರ್ಣಗೊಳಿಸಿದ್ದಳು. ಈಕೆಯ ಪ್ರತಿಭೆಯನ್ನು ಗುರುತಿಸಿದ್ದ ನವೋದಯ ಶಾಲೆಯ ಆಡಳಿತ ಮಂಡಳಿ, ಪುಣೆಯಲ್ಲಿ ನಡೆದ ತರಬೇತಿಗೂ ಆಯ್ಕೆ ಮಾಡಿತ್ತು. ಸೆ. 13ರಂದು ನಡೆದ ನೀಟ್ ವೇಳೆ ತನುಜಾಳ ಮನೆಯ ಪ್ರದೇಶವನ್ನು ಕಂಟೇನ್ಮೆಂಟ್ ವಲಯವೆಂದು ಘೋಷಿಸಲಾಗಿತ್ತು. ಜತೆಗೆ, ತನುಜಾಗೂ ಜ್ವರ ಬಂದಿದ್ದರಿಂದ ಪರೀಕ್ಷೆಗೆ ಹಾಜರಾಗಿರಲಿಲ್ಲ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾಷ್ಟ್ರೀಯ ಟೆಸ್ಟಿಂಗ್ ಏಜೆನ್ಸಿ (ಎನ್ಟಿಎ) ಮತ್ತೊಮ್ಮೆ ಪರೀಕ್ಷೆ ಏರ್ಪಡಿಸಿತು. ಈ ಬಾರಿ ಪರೀಕ್ಷೆ ಬರೆಯಲು ಕೋವಿಡ್ ಸಂಬಂಧಿಸಿದ ವರದಿ ಮತ್ತು ಕೆಲವು ದಾಖಲೆಗಳನ್ನು ಇ-ಮೇಲ್ ಮೂಲಕ ಕಳುಹಿಸಬೇಕು ಎಂದೂ ಎನ್ಟಿಎ ಸೂಚಿಸಿತ್ತು.

ಆದರೆ, ತನಗೆ ಎದುರಾದ ಸಮಸ್ಯೆಯನ್ನು ಸಾಮಾಜಿಕ ಜಾಲತಾಣದಲ್ಲಿ ತನುಜಾ ಹೇಳಿಕೊಂಡಿದ್ದನ್ನು ಗಮನಿಸಿದ ಮುಖ್ಯಮಂತ್ರಿ, ಹಿರಿಯ ಅಧಿಕಾರಿಗಳ ಜೊತೆ ಈ ಬಗ್ಗೆ ಚರ್ಚಿಸಿದ್ದರು. ಎನ್ಟಿಎ ತಾಂತ್ರಿಕ ನಿರ್ದೇಶಕರ ಜೊತೆ ಸಚಿವ ಸುಧಾಕರ್ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸುವ ಮೂಲಕ ತನುಜಾಳಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.