ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರ ಅಧ್ಯಯನ ಪ್ರವಾಸ ನಾಳೆಯಿಂದ: ಬಿಎಸ್‌ವೈ

ಶೀಘ್ರ ವಿರೋಧ ಪಕ್ಷದ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ
Published 3 ನವೆಂಬರ್ 2023, 17:03 IST
Last Updated 3 ನವೆಂಬರ್ 2023, 17:03 IST
ಅಕ್ಷರ ಗಾತ್ರ

ಶಿವಮೊಗ್ಗ: ‘ರಾಜ್ಯದಲ್ಲಿ ಈಗಾಗಲೇ ಪಕ್ಷದಿಂದ ಬರ ಅಧ್ಯಯನ ಪ್ರವಾಸ ಆರಂಭಿಸಲಾಗಿದೆ. ನವೆಂಬರ್ 5ರಿಂದ ರಾಜ್ಯದ ವಿವಿಧೆಡೆ ನಾನೂ ಪ್ರವಾಸ ಕೈಗೊಳ್ಳಲಿದ್ದೇನೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಭದ್ರಾವತಿಯ ವಿಎಎಸ್‌ಎಲ್ ಕಾರ್ಖಾನೆಗೆ 100 ವರ್ಷ ಆಗಿದೆ. ನಟ ದೊಡ್ಡಣ್ಣ ಅವರ ನೇತೃತ್ವದಲ್ಲಿ ನ. 4 ಮತ್ತು 5ರಂದು ದೊಡ್ಡ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಭಾಗವಹಿಸಲು ಬಂದಿದ್ದೇನೆ. ಆ ಕಾರ್ಯಕ್ರಮ ಮುಗಿದ ನಂತರ ಬರ ಅಧ್ಯಯನ ಪ್ರವಾಸದಲ್ಲಿ ಭಾಗವಹಿಸುತ್ತೇನೆ. ಈಗಾಗಲೇ 18 ತಂಡಗಳ ಮೂಲಕ ಬಿಜೆಪಿ ನಾಯಕರು ರಾಜ್ಯದ ಮೂಲೆ ಮೂಲೆಗೂ ತೆರಳಿದ್ದಾರೆ ಎಂದರು.

ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಆಯ್ಕೆ ವಿಳಂಬವಾಗಿರುವುದು ನಿಜ. ಇನ್ನೂ ಕೆಲವೇ ದಿನಗಳಲ್ಲಿ ಪಕ್ಷದ ವರಿಷ್ಠರು ಹೆಸರು ಪ್ರಕಟ ಮಾಡುತ್ತಾರೆ. ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆಗೂ ಆಗಲಿದೆ ಎಂದರು.

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಹೆಸರು ನಾಲ್ಕು ದಿನಗಳಲ್ಲಿ ಪ್ರಕಟವಾಗಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ ಅದಕ್ಕೂ ನಮಗೂ ಸಂಬಂಧವಿಲ್ಲ. ನಮ್ಮ ಪಕ್ಷದಿಂದ ಆದಷ್ಟು ಬೇಗ ಗೆಲ್ಲುವ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುವುದು ಮತ್ತು ಅತಿ ಹೆಚ್ಚಿನ ಸ್ಥಾನವನ್ನು ಕೂಡ ಗೆಲ್ಲುತ್ತೇವೆ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ. ಪಕ್ಷ ತನ್ನದೇ ಆದ ರೀತಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತದೆ ಎಂದರು.

ರಾಜ್ಯ ನಾಯಕರಾದ ಕೆ.ಎಸ್.ಈಶ್ವರಪ್ಪ, ಸದಾನಂದಗೌಡ, ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಕೇಂದ್ರ ನಾಯಕರು ಕರೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ಸಂಘಟನೆಯ ಬಗ್ಗೆ ಚರ್ಚೆಗೆ ಕರೆದಿರುತ್ತಾರೆ. ಅದರಲ್ಲಿ ವಿಶೇಷವೇನೂ ಇಲ್ಲ ಎಂದರು.

ಈ ಸಂದರ್ಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ನಟ ದೊಡ್ಡಣ್ಣ ಇದ್ದರು.

‘ಸಿಗಂದೂರು–ತುಮರಿ ಸೇತುವೆ ಶೀಘ್ರ ಪೂರ್ಣ’

ಸಿಗಂದೂರು–ತುಮರಿ ಸೇತುವೆಯ ವಿಳಂಬಕ್ಕೆ ಪ್ರತಿಕ್ರಿಯಿಸಿದ ಸಂಸದ ಬಿ.ವೈ.ರಾಘವೇಂದ್ರ ಕೆಲವೊಂದು ತಾಂತ್ರಿಕ ತೊಂದರೆಗಳಿಂದ ಎರಡು ತಿಂಗಳು ವಿಳಂಬವಾಗಿರುವುದುದು ನಿಜ ಎಂದರು. ಹವಾಮಾನ ವೈಫರಿತ್ಯದಿಂದಾಗಿ ಮಳೆ ಹೆಚ್ಚಿದರೂ ಕಡಿಮೆ ಆದರೂ ಆ ಪ್ರದೇಶದಲ್ಲಿ ಕಾಮಗಾರಿ ಸ್ವಲ್ಪ ಕಠಿಣವಾಗುವುದರಿಂದ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಆಗಿಲ್ಲ. ಲೋಕಸಭಾ ಚುನಾವಣೆಯ ಒಳಗೆ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದೆ. ಕೇಂದ್ರ ಸಚಿವ ನಿತಿನ್‌ ಗಡ್ಕರಿ ಲೋಕಾರ್ಪಣೆ ಮಾಡಲಿದ್ದಾರೆ ಎಂದು ರಾಘವೇಂದ್ರ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT