ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್– ಕಾರು ಅಪಘಾತ: ಇಬ್ಬರ ಸಾವು

Last Updated 2 ಆಗಸ್ಟ್ 2022, 2:15 IST
ಅಕ್ಷರ ಗಾತ್ರ

ಸಾಗರ: ತಾಲ್ಲೂಕಿನ ತಾಳಗುಪ್ಪದ ಆಲಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನ ಚಾಲಕ ಹಾಗೂ ಬಾಲಕ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾರಿನ ಚಾಲಕ ಚನ್ನಗಿರಿಯ ಶಾಭಾಜ್ (23) ಸ್ಥಳದಲ್ಲೇ ಮೃತಪಟ್ಟಿದ್ದು, ಬಾಲಕ ರಿಹಾನ್ (14) ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಕಾರಿನಲ್ಲಿದ್ದ ತಬಸುಮ್ (23), ಶಿಫಾ (27), ಖಮರುನ್ನೀಸಾ (45), ಜಬ್ರುನ್ (55), ಮಹ್ಮದ್ ಉಸ್ಮಾನ್ (25) ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಿನಲ್ಲಿದ್ದ ಎಲ್ಲರೂ ಒಂದೇ ಕುಟುಂಬದವರಾಗಿದ್ದು, ಜೋಗ ಜಲಪಾತ ನೋಡಲು ಚನ್ನಗಿರಿಯಿಂದ ಬಂದಿದ್ದರು. ಜಲಪಾತ ನೋಡಿ ಊರಿಗೆ ಮರಳುತ್ತಿರುವಾಗ ಅಪಘಾತ ಸಂಭವಿಸಿದೆ.

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT