ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಸ್ಕ್‌ ಧರಿಸದವರಿಂದ₹ 1.84 ಲಕ್ಷ ದಂಡ ವಸೂಲಿ

Last Updated 27 ಸೆಪ್ಟೆಂಬರ್ 2020, 3:12 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದರೂ ಮಾಸ್ಕ್ ಹಾಕದೇ ತಿರುಗಾಡುತ್ತಿದ್ದವರಿಗೆ ಜಿಲ್ಲಾ ಪೊಲೀಸರು ದಂಡದ ರುಚಿ ತೋರಿಸಿದ್ದು, ಎರಡೇ ದಿನಕ್ಕೆ ₹ 1.84 ಲಕ್ಷ ದಂಡ ವಿಧಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕದೇ ಓಡಾಡುತ್ತಿರುವವರಿಂದ ನಗರಪಾಲಿಕೆ ಅಧಿಕಾರಿಗಳು, ಪೊಲೀಸರು ದಿಢೀರ್ ಕಾರ್ಯಾಚರಣೆ ನಡೆಸಿ ದಂಡ ವಸೂಲಿ ಮಾಡುತ್ತಿದ್ದಾರೆ.

ಸೆ.24 ಮತ್ತು 25ರಂದು ಕಾರ್ಯಾಚರಣೆ ನಡೆಸಿ ಒಟ್ಟು 1,125 ಮಂದಿಯಿಂದ₹ 1.84 ಲಕ್ಷ ದಂಡ ಸಂಗ್ರಹಿಸಿದ್ದಾರೆ. ಸೆ.24ರಂದು 477 ಮಂದಿಯಿಂದ ₹ 81,400 ದಂಡ ಹಾಗೂ ಸೆ.25ರಂದು 748 ಮಂದಿಯಿಂದ ₹ 1.3 ಲಕ್ಷ ದಂಡ ಸಂಗ್ರಹಿಸಿದ್ದಾರೆ. ಮಾಸ್ಕ್ ಧರಿಸದೇ ಓಡಾಡುವರರ ವಿರುದ್ಧ ಪೊಲೀಸರ ಕಾರ್ಯಾಚರಣೆ
ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT