ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿ.ವೈ. ವಿಜಯೇಂದ್ರಗೆ ಶಿವಮೊಗ್ಗ ಬಿಜೆಪಿ ಜಿಲ್ಲಾ ಘಟಕದಿಂದ ಅದ್ಧೂರಿ ಸ್ವಾಗತ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ತವರು ಜಿಲ್ಲೆಗೆ
Published 29 ನವೆಂಬರ್ 2023, 6:25 IST
Last Updated 29 ನವೆಂಬರ್ 2023, 6:25 IST
ಅಕ್ಷರ ಗಾತ್ರ

ಶಿವಮೊಗ್ಗ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ತವರು ಜಿಲ್ಲೆಗೆ ಬಂದ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಶಿವಮೊಗ್ಗದ ಪಕ್ಷದ ಜಿಲ್ಲಾ ಕಚೇರಿಗೆ ಭೇಟಿ ನೀಡಿದರು.

ಈ ವೇಳೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ.ಮೇಘರಾಜ್ ನೇತೃತ್ವದಲ್ಲಿ ವಾದ್ಯ ಮೇಳದೊಂದಿಗೆ ವಿಜಯೇಂದ್ರ ಅವರನ್ನು ಸ್ವಾಗತಿಸಲಾಯಿತು. ಬಿಜೆಪಿ ಕಚೇರಿಯನ್ನು ಚಪ್ಪರ, ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು.

ಬಿ.ವೈ.ವಿಜಯೇಂದ್ರ ಬಿಜೆಪಿ ಕಚೇರಿಗೆ ಬಂದಾಗ ಕಾರ್ಯಕರ್ತರ ಹರ್ಷೋದ್ಗಾರ ಮುಗಿಲುಮುಟ್ಟಿತ್ತು. ಪಟಾಕಿ ಸಿಡಿಸಿ, ಭಾರತ ಮಾತಾಕಿ ಜೈ ಘೋಷಣೆ ಮಾಡಿದರು.

ಈ ವೇಳೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಎಲ್ಲರೂ ಒಟ್ಟಾಗಿ ಪಕ್ಷ ಕಟ್ಟಬೇಕಿದೆ ಎಂದರು.

ಮುಂಬರುವ ಲೋಕಸಭಾ ಚುನಾವಣೆ ನಮ್ಮ ಎದುರಿನ ಸವಾಲಾಗಿದೆ. ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕಿದೆ. ಇದಕ್ಕೆ ಪಕ್ಷದ ಎಲ್ಲ ನಾಯಕರು ಕೈ ಜೋಡಿಸಬೇಕಿದೆ ಎಂದರು.

ನಂತರ ಬಿ.ವೈ.ವಿಜಯೇಂದ್ರ ಅವರನ್ನು ಕಾರ್ಯಕರ್ತರು ಬೈಕ್ ರ್ಯಾಲಿಯಲ್ಲಿ ಪಿಇಎಸ್ ಕಾಲೇಜು ಸಭಾಂಗಣಕ್ಕೆ ಕರೆದೊಯ್ಯಲಿದ್ದು, ಅಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ವಿಜಯೇಂದ್ರ ಅವರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT