ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಟರ್‌ಸಿಟಿ ರೈಲಿನಲ್ಲಿ ಮತಯಾಚಿಸಿದ ಬಿ.ವೈ.ಆರ್

-
Published 21 ಏಪ್ರಿಲ್ 2024, 15:06 IST
Last Updated 21 ಏಪ್ರಿಲ್ 2024, 15:06 IST
ಅಕ್ಷರ ಗಾತ್ರ

ಶಿವಮೊಗ್ಗ: ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಭಾನುವಾರ ಬೆಳಿಗ್ಗೆ ತಾಳಗುಪ್ಪದಿಂದ ಬೆಂಗಳೂರಿಗೆ ಹೋಗುವ ಇಂಟರ್‌ಸಿಟಿ ರೈಲಿನಲ್ಲಿ ಪ್ರಯಾಣಿಕರನ್ನು ಭೇಟಿ ಮಾಡಿ ತಮ್ಮ ಸಾಧನೆಯ ಪ್ರತಿ ನೀಡಿ ಮತಯಾಚಿಸಿದರು.

‘ಕೇಂದ್ರ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು ತರುವ ಗುರಿ ಹೊಂದಿದ್ದೇನೆ. ಇದು ಕೇವಲ ಟ್ರೈಲರ್ ಮಾತ್ರ ಇನ್ನೂ ಪಿಕ್ಚರ್ ಬಾಕಿ ಇದೆ. ಅದನ್ನು ನಿಮ್ಮೆಲ್ಲರ ಆಶೀರ್ವಾದದಿಂದ ಪೂರೈಸುತ್ತೇನೆ’ ಎಂಬ ವಿಶ್ವಾಸವಿದೆ ಎಂದರು.

‘ನಾನು ಸಂಸದನಾಗುವ ಮೊದಲು ಕೇವಲ ಬೆರಳೆಣಿಕೆಯಷ್ಟು ರೈಲುಗಳು ಶಿವಮೊಗ್ಗ ನಗರಕ್ಕೆ ಬರುತ್ತಿದ್ದವು. ಈಗ ಮಹಾನಗರಗಳೂ ಸೇರಿದಂತೆ ಹಲವು ನಗರ ಹಾಗೂ ಜಿಲ್ಲೆಗಳಿಗೆ ಶಿವಮೊಗ್ಗದಿಂದ ರೈಲ್ವೇ ಸಂಪರ್ಕ ಕಲ್ಪಿಸಲಾಗಿದೆ. ಇದು ರೈಲ್ವೇ ಕ್ಷೇತ್ರದಲ್ಲಿ ಅಲ್ಪಾವಧಿಯಲ್ಲಿ ಮಾಡಿದ ಸಾಧನೆ’  ಎಂದು ಹೇಳಿದರು.

ನಂತರ ಭದ್ರಾವತಿ ರೈಲ್ವೇ ನಿಲ್ದಾಣದ ಮುಂಭಾಗದಲ್ಲಿರುವ ವಿಶ್ವೇಶ್ವರಯ್ಯ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮತ ನೀಡುವಂತೆ ಅಲ್ಲಿ ನೆರೆದಿದ್ದವರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ, ಪ್ರಶಾಂತ್ ಕುಕ್ಕೆ, ಭದ್ರಾವತಿ ಬಿಜೆಪಿ ಮುಖಂಡ ಧರ್ಮಪ್ರಸಾದ್, ಮಂಗೋಟೆ ರುದ್ರೇಶ್, ರಾಹುಲ್ ಬಿದರೆ, ಆನಂದ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT