ಶನಿವಾರ, ಫೆಬ್ರವರಿ 4, 2023
21 °C

‘ವಿದ್ಯಾರ್ಥಿ ವೇತನ ರದ್ದು: ದಲಿತರಿಗೆ ಬಗೆದ ದ್ರೋಹ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ‘ಒಂದನೇ ತರಗತಿಯಿಂದ ಎಂಟನೇ ತರಗತಿಯವರೆಗೆ ಪರಿಶಿಷ್ಟ ಜಾತಿ ಮತ್ತು ಪಂಗಡ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ಕೇಂದ್ರ ಸರ್ಕಾರ ರದ್ದುಪಡಿಸಿರುವುದು ದಲಿತ ವಿರೋಧಿ ಕ್ರಮ’ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಕಳೆದ ವರ್ಷ ಸುಮಾರು 60 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ರದ್ದು ಮಾಡಲಾಗಿದೆ. ಸುಮಾರು 2000 ಸಂಶೋಧನಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿಲ್ಲ. ಜೊತೆಗೆ ವಿದೇಶಗಳಿಗೆ ಹೋಗುವ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನ ನಿಲ್ಲಿಸಲಾಗಿದೆ. ಇದೆಲ್ಲವನ್ನು ಗಮನಿಸಿದರೆ ಹಿಂದುಳಿದ, ಧಾರ್ಮಿಕ ಅಲ್ಪಸಂಖ್ಯಾತ ಹಾಗೂ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬೇಕೆನ್ನುವುದು ಕೇಂದ್ರದ ಉದ್ದೇಶವಾಗಿದೆ. ಬಡವರ ಮಕ್ಕಳು ಶಿಕ್ಷಣ ಪಡೆಯದೇ ಗುಲಾಮರಾಗಬೇಕೆನ್ನುವುದು ಬಿಜೆಪಿಯ ಧ್ಯೇಯ’ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಪತ್ರಿಕಾ ಪ್ರಕಟಣೆಯಲ್ಲಿ ಟೀಕಿಸಿದ್ದಾರೆ.

ಇನ್ನು ಬೊಮ್ಮಾಯಿ ನೇತೃತ್ವದ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಉಪ ಯೋಜನೆಯಡಿ ಈ ವರ್ಷ ಹಂಚಿಕೆಯಾದ ₹ 29,165 ಕೋಟಿ ಹಣದಲ್ಲಿ ಕೇವಲ ₹ 4,033 ಕೋಟಿ ಹಣವನ್ನು ಮಾತ್ರ ಖರ್ಚು ಮಾಡಿರುವುದು ದಲಿತರಿಗೆ ಬಗೆದ ದ್ರೋಹವಾಗಿದೆ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು