ಶಿವಮೊಗ್ಗ: ಗಾಂಜಾ ಮಾರಾಟ ಮಾಡುತ್ತಿದ್ದ ಐವರಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹25,000 ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ.

2022ರ ಜುಲೈ 12 ರಂದು ತೀರ್ಥಹಳ್ಳಿಯ ವಿಠಲ ನಗರದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ತೀರ್ಥಹಳ್ಳಿ ಉಪವಿಭಾಗ ಡಿವೈಎಸ್ಪಿ ಶಾಂತವೀರ್ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು, ₹3,550 ನಗದು ಹಾಗೂ 1 ಕೆ.ಜಿ 564 ಗ್ರಾಂ ತೂಕದ ಗಾಂಜಾ ವಶಪಡಿಸಿಕೊಂಡಿದ್ದರು.

ಆರೋಪಿಗಳಾದ ಪಶ್ಚಿಮ ಬಂಗಾಳ ಮೂಲದ ಅಲೋಕ್ ಮಂಡಲ್ (34), ಶ್ರೀಬಾಷ್ ಸರ್ಕಾರ್ (20), ಅಮ್ರಿತ್ ಮಂಡಲ್ (27), ಸಂಕರ್ ಬ್ಯಾಪಾರಿ (28), ಹರಧನ್ ಮಂಡಲ್ (32) ಎಂಬುವ ವಿರುದ್ಧ ಪ್ರಕರಣ ದಾಖಲಿಸಿದ್ದರು. ತನಿಖಾಧಿಕಾರಿ ಅಶ್ವತ್ ಗೌಡ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಂಜುನಾಥ ನಾಯಕ್, ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ವಕೀಲ ಎ.ಎಂ. ಸುರೇಶ್ ಕುಮಾರ್ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.