ಶನಿವಾರ, ಮಾರ್ಚ್ 25, 2023
29 °C

ಕಾಂಗ್ರೆಸ್‌ನಲ್ಲಿ ಜಾತಿಗೊಬ್ಬರು ಮುಖ್ಯಮಂತ್ರಿ ರೇಸ್‌ನಲ್ಲಿರುವರು: ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ‘ರಾಜ್ಯ ಕಾಂಗ್ರೆಸ್‌ನಲ್ಲಿ ಕೆಲ ಕೌರವರು ಅಧಿಕಾರ ಹಿಡಿಯಬೇಕು ಎಂದು ಪ್ರಯತ್ನಿಸುತ್ತಿದ್ದಾರೆ. ಜಾತಿಗೆ ಒಬ್ಬೊಬ್ಬರು ಮುಖ್ಯಮಂತ್ರಿ ರೇಸ್‌ನಲ್ಲಿದ್ದಾರೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಟೀಕಿಸಿದರು.

ನಗರದಲ್ಲಿ ಭಾನುವಾರ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ‘ಸಾಮಾಜಿಕ ನ್ಯಾಯ ನೀಡುವುದಾಗಿ ಕೇವಲ ಬಾಯಿ ಮಾತಲ್ಲಿ ಹೇಳುತ್ತಿರುವ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಪರಮೇಶ್ವರ್, ತನ್ವಿರ್ ಸೇಠ್ ಜಾತಿ ಹೆಸರಲ್ಲಿ ಮುಖ್ಯಮಂತ್ರಿ ರೇಸ್‌ನಲ್ಲಿದ್ದಾರೆ’ ಎಂದು ಕುಟುಕಿದರು.

‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚಾಮರಾಜನಗರದಲ್ಲಿ ಕಾರ್ಯಕರ್ತರ ಮೂಲಕ ನಾನೇ ಮುಖ್ಯಮಂತ್ರಿ ಎಂದು ಹೇಳಿಸುತ್ತಾರೆ. ದಲಿತ ಮುಖ್ಯಮಂತ್ರಿ ಜಪ ಮಾಡುತ್ತಾ ಪರಮೇಶ್ವರ್ ನಾನೇ ಮುಖ್ಯಮಂತ್ರಿ ಎಂದು ಹೇಳಿಸುತ್ತಿದ್ದಾರೆ. ಇತ್ತ ಅಲ್ಪಸಂಖ್ಯಾತರಿಂದ ತನ್ವೀರ್ ಸೇಠ್ ನಾನೂ ಇದ್ದೇನೆ ಎನ್ನುತ್ತಿದ್ದಾರೆ. ಇವರಿಗೆ ಮಾನ–ಮರ್ಯಾದೆ ಇದ್ದಿದ್ದರೆ, ಜನರಿಂದ ತಿರಸ್ಕಾರಗೊಂಡ ಬಳಿಕ ಸುಮ್ಮನಿರಬೇಕಿತ್ತು’ ಎಂದು ಲೇವಡಿ ಮಾಡಿದರು.

‘ಧರ್ಮವನ್ನು ಹಾಳು ಮಾಡುವ ಕಾಂಗ್ರೆಸ್ ಪಕ್ಷವನ್ನು ಜನರೇ ತಿರಸ್ಕಾರ ಮಾಡಿ ಹೊರಗಟ್ಟಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿರುವಾಗಲೇ, ತಾವು ಮುಖ್ಯಮಂತ್ರಿ ಎಂದು ಇವರೇ ಬಡಿದಾಡಿಕೊಳ್ಳುತ್ತಿದ್ದಾರೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು