ಪುತ್ರಿಗೆ ಸಿಬಿಐ ನೋಟಿಸ್: ಕುಟುಂಬದವರು ಟಾರ್ಗೆಟ್ ಆಗಿದ್ದಾರೆ ಎಂದ ಡಿಕೆಶಿ

ಶಿವಮೊಗ್ಗ: ‘ಅಕ್ರಮ ಆಸ್ತಿ ಹೊಂದಿರುವ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದ ಸಂಬಂಧ ಸಿಬಿಐ ಅಧಿಕಾರಿ ಗಳು ಈಗ ನನ್ನ ಕುಟುಂಬದವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ಭದ್ರಾವತಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಂಗಳವಾರ ಸಿಬಿಐ ಅಧಿಕಾರಿಗಳು ನನ್ನ ಪುತ್ರಿಗೆ ನೋಟಿಸ್ ನೀಡಿದ್ದಾರೆ’ ಎಂದು ಹೇಳಿದರು. ‘ಆಕೆ ಓದುತ್ತಿದ್ದಾಗ ಕಾಲೇಜಿಗೆ ಎಷ್ಟು ಫೀಸ್ ಕಟ್ಟಲಾಗಿತ್ತು, ಎಷ್ಟು ವಿಷಯಗಳಲ್ಲಿ ಪಾಸ್ ಮಾಡಿದ್ದಾರೆ ಎಂದೆಲ್ಲಾ ಪ್ರಶ್ನಿಸಿದ್ದಾರೆ. ಎಷ್ಟು ಕೀಳುಮಟ್ಟದಲ್ಲಿ ನಮ್ಮನ್ನು ನಡೆಸಿಕೊಳ್ಳಲಾಗುತ್ತಿದೆ ಎಂಬುದನ್ನು ನೀವೇ (ಮಾಧ್ಯಮ) ಊಹಿಸಿ’ ಎಂದು ತಿಳಿಸಿದರು.
ಚುನಾವಣೆ ಹತ್ತಿರವಾದಂತೆ ಅನೇಕ ಬೆಳವಣಿಗೆಗಳು ನಡೆಯುತ್ತಿವೆ. ಇತ್ತೀಚೆಗಷ್ಟೇ ನಾನು ಇ.ಡಿ ವಿಚಾರಣೆಗೆ ಹಾಜರಾಗಿದ್ದೇನೆ. ಮತ್ತೆ ಫೆ. 27ಕ್ಕೆ ಬರಲು ತಿಳಿಸಿದ್ದಾರೆ ಎಂದರು.
‘ಈ ಸ್ಥಿತಿಯಲ್ಲಿ ‘ಪ್ರಜಾಧ್ವನಿ’ ಕಾರ್ಯಕ್ರಮದಲ್ಲಿ ಭಾಗವಹಿಸುವುದೋ, ತನಿಖೆ ಎದುರಿಸುವುದೋ ತಿಳಿಯುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.