ಸೋಮವಾರ, ಜನವರಿ 17, 2022
20 °C
ಬೆಜ್ಜವಳ್ಳಿ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಗರುಡ ದರ್ಶನ

ತೀರ್ಥಹಳ್ಳಿ: ಸಂಭ್ರಮದ ಮಕರ ಸಂಕ್ರಮಣ ಜಾತ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಜ್ಜವಳ್ಳಿ (ತೀರ್ಥಹಳ್ಳಿ): ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಮಕರ ಸಂಕ್ರಮಣ ಜಾತ್ರೆ ಸಂಭ್ರಮದಿಂದ ನೆರವೇರಿತು. ಜಾತ್ರೆಯಲ್ಲಿ ನೂರಾರು ಜನರು ಸೇರಿ ದೇವರ ದರ್ಶನ ಪಡೆದರು.

ಸಂಕ್ರಾಂತಿ ಅಂಗವಾಗಿ ದೇವಾಲಯದಲ್ಲಿ  ಭಕ್ತರು ಗರುಡ ದರ್ಶನ ಪಡೆದರು. ಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ನಡೆಯಿತು.

ಮಕರ ಸಂಕ್ರಮಣ ಅಂಗವಾಗಿ ತಾಲ್ಲೂಕಿನ ಕುಂದಾದ್ರಿ ಬೆಟ್ಟ, ಪಟ್ಟಣದ ಲಕ್ಷ್ಮೀ ವೆಂಕಟರಮಣ ದೇವಾಲಯ, ಆರಗದ ಅರುಣಗಿರಿ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು
ನಡೆದವು.

ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ನಿರೀಕ್ಷೆಗೂ ಮೀರಿ ಭಕ್ತರು ಸೇರಿದ್ದು, ಕೋವಿಡ್‌ ನಿಯಮ ಪಾಲನೆಯಾಗಲಿಲ್ಲ.

ಮಕರ ಸಂಕ್ರಾಂತಿ ಅಂಗವಾಗಿ ತಾಲ್ಲೂಕಿನ ವಿವಿಧೆಡೆ ಜಾತ್ರಾ ಮಹೋತ್ಸವ, ರಥೋತ್ಸವಗಳು ಸಂಭ್ರಮದಿಂದ ನಡೆದವು.

ಪಾಲನೆಯಾಗದ ನಿಯಮ: ಕೋವಿಡ್‌ ಸೋಂಕು ತಡೆಯಲು ಸರ್ಕಾರ ಪ್ರಕಟಿಸಿರುವ ನಿರ್ಬಂಧ ಬಹುತೇಕ ಧಾರ್ಮಿಕ ಕೇಂದ್ರಗಳಲ್ಲಿ ಪಾಲನೆಯಾಗಲಿಲ್ಲ. ಪೊಲೀಸ್‌, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಅಧಿಕಾರಿ, ಸಿಬ್ಬಂದಿ ನಿಯಮ ಉಲ್ಲಂಘಿಸಿ ವಿವಿಧ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಭಕ್ತರಿಗೆ ಭೋಜನ ವ್ಯವಸ್ಥೆಯನ್ನೂ ಏರ್ಪಡಿಸಲಾಗಿತ್ತು.

ಅಧಿಕಾರಿಗಳೇ ನಿಯಮ ಪಾಲಿಸಲಿಲ್ಲ. ಕೊರೊನಾ ಆತಂಕದ ನಡುವೆಯೂ ಗೃಹ ಸಚಿವರ ಕ್ಷೇತ್ರದಲ್ಲೇ ಜಾತ್ರೆಗಳು ಸಂಭ್ರಮದಿಂದ ನಡೆಯುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು