ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೊರಬ: ‘ಚಾಮುಂಡಿ ಎಕ್ಸ್‌ಪ್ರೆಸ್‘ ಖ್ಯಾತಿಯ ಹೋರಿ ₹18 ಲಕ್ಷಕ್ಕೆ ಖರೀದಿ

Last Updated 15 ಜೂನ್ 2022, 4:33 IST
ಅಕ್ಷರ ಗಾತ್ರ

ಸೊರಬ: ಹೋರಿ ಹಬ್ಬದಲ್ಲಿ ರಾಜ್ಯದಾದ್ಯಂತ ಹೆಸರು ಮಾಡಿ, ಲಕ್ಷಾಂತರ ಅಭಿಮಾನಿಗಳನ್ನು ಗಳಿಸಿರುವ ಚಾಮುಂಡಿ ಎಕ್ಸ್‌ಪ್ರೆಸ್ ಎಂದು ಹೆಸರಾದ ಹೋರಿಯನ್ನು ತಾಲ್ಲೂಕಿನ ಸಮನವಳ್ಳಿ ಗ್ರಾಮದ ಸಮಾಜ ಸೇವಕ ಪ್ರಸನ್ನಕುಮಾರ್ ಎಂ. ಸಮನವಳ್ಳಿ ಅವರು ದಾಖಲೆಯ ಮೊತ್ತಕ್ಕೆ ಖರೀದಿ ಮಾಡಿದ್ದಾರೆ.

ಚಿಕ್ಕಲಿಂಗದಹಳ್ಳಿಯ ಚಾಮುಂಡಿ ಎಕ್ಸ್‌ಪ್ರೆಸ್ ಭಾಗವಹಿಸಿರುವ ಎಲ್ಲ ಹೋರಿ ಹಬ್ಬಗಳಲ್ಲೂ ಬಂಪರ್ ಬಹುಮಾನ ಪಡೆದಿದೆ. ಈ ಹೋರಿಯನ್ನು ಪ್ರಸನ್ನ ಕುಮಾರ್ ₹ 18 ಲಕ್ಷಕ್ಕೆ ಖರೀದಿಸುವ ಮೂಲಕ ಹೋರಿಯ ಅಭಿಮಾನಿಗಳು ಹುಬ್ಬೇರಿಸುವಂತೆ ಮಾಡಿದ್ದಾರೆ.

‘ಅಖಾಡದಲ್ಲಿ ಪೀಪಿ, ಬಲೂನ್‌, ಜೂಲಗಳನ್ನು ಹೊತ್ತು ಯಾರೊಬ್ಬರ ಕೈಗೂ ಸಿಗದೇ ಓಡುವುದೇ ಈ ಹೋರಿಯ ವಿಶೇಷವಾಗಿದೆ. ಓಟದ ಸಮಯ ಬಿಟ್ಟರೆ ಸೌಮ್ಯವಾಗಿರುವ ಈ ಹೋರಿ ಅಂದರೆ ಮಕ್ಕಳಿಗೂ ಅಚ್ಚುಮೆಚ್ಚು. ಆದ್ದರಿಂದ ಹಣಕ್ಕೆ ಬೆಲೆ ಕೊಡದೇ ಅದರ ಗುಣ ನೋಡಿ ಖರೀದಿ ಮಾಡಿದ್ದೇನೆ’ ಎಂದು ಪ್ರಸನ್ನ ಸಮನವಳ್ಳಿ ‘ಪ್ರಜಾವಾಣಿ’ಗೆ ತಿಳಿಸಿದರು.

‘ನಾನೂ ಹೋರಿ ಹಬ್ಬದ ಅಭಿಮಾನಿ. ನನ್ನ ಬಳಿ ಏಕದಂತ, ರೇಣುಕಾಂಬ ಎಕ್ಸ್‌ಪ್ರೆಸ್, ಸಮನವಳ್ಳಿ ಅಧ್ಯಕ್ಷ, ಸಮನವಳ್ಳಿ ಸಾಹುಕಾರ ಎಂಬ ಹೋರಿಗಳಿವೆ. ಮಗ ಪರೀಕ್ಷಿತ್ ಕೆಲ ದಿನಗಳಿಂದ ಆಟವಾಡುವಾಗ ಚಾಮುಂಡಿ ಎಕ್ಸ್‌ಪ್ರೆಸ್ ಎಂದು ಆಟವಾಡುತ್ತಿದ್ದನು. ಅಷ್ಟರಲ್ಲೇ ಚಾಮುಂಡಿ ಎಕ್ಸ್‌ಪ್ರೆಸ್ ಹೋರಿ ಮಾರಾಟಕ್ಕಿರುವ ವಿಷಯ ತಿಳಿದು ಖರೀದಿಸಿದ್ದೇನೆ’ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT