ಸೊರಬ: ಮಲೆನಾಡು ಹಾಗೂ ಬಯಲುಸೀಮೆ ಜನರ ಪಾಲಿನ ಶಕ್ತಿ ದೇವತೆ ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನಕ್ಕೆ ಬುದ್ಧ ಪೂರ್ಣಿಮೆ ನಿಮಿತ್ತ ಶುಕ್ರವಾರ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದು ದೇವಿಯ ದರ್ಶನ ಪಡೆದರು.

ತಾಲ್ಲೂಕು ಸೇರಿ ಬ್ಯಾಡಗಿ, ರಾಣೇಬೆನ್ನೂರು, ಹರಿಹರ, ಶಿಕಾರಿಪುರ, ಹಾನಗಲ್, ವಿಜಯಪುರ, ಚಿತ್ರದುರ್ಗ, ಶಿವಮೊಗ್ಗ, ಬೆಳಗಾವಿ, ಹಾವೇರಿ ಸೇರಿ ಉತ್ತರ ಕರ್ನಾಟಕ ಭಾಗಗಳಿಂದ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ರೇಣುಕಾ ದೇವಿಯ ದರ್ಶನ ಪಡೆದು ದೇವಿ ಹೆಸರಿನಲ್ಲಿ ವಿವಿಧ ಧಾರ್ಮಿಕ ಆಚರಣೆಗಳನ್ನು ನಡೆಸಿದರು. ಹುಣ್ಣಿಮೆ ಅಂಗವಾಗಿ ದೇವಸ್ಥಾನದ ಆವರಣದಲ್ಲಿರುವ ಪರಿವಾರ ದೇವರುಗಳಾದ ಕಾಲಭೈರವ, ನಾಗದೇವತೆ, ಮಾತಂಗಿ, ಪರಶುರಾಮ, ತ್ರಿಶೂಲದ ಬೈರಪ್ಪ ದೇವರುಗಳಿಗೆ ಮತ್ತು ತೊಟ್ಟಿಲು ಬಾವಿಗೆ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು.

ಕೆಲ ಭಕ್ತರು ಖಾದ್ಯಗಳನ್ನು ತಯಾರಿಸಿಕೊಂಡು ಬಂದು ದೇವಿಯ ಹೆಸರಿನಲ್ಲಿ ನೈವೇದ್ಯ ಅರ್ಪಿಸಿ ನಂತರ ಬಂಧು– ಬಳಗದವರ ಜೊತೆ ಸಹ ಭೋಜನ ಮಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-42-119148195

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.