ಭದ್ರಾವತಿ: ‘ಜನ್ಮದಿನಗಳನ್ನು ವೈಯಕ್ತಿಕವಾಗಿ ಆಚರಿಸುವುದಕ್ಕಿಂತಲೂ ಅದನ್ನು ಸಮಾಜಕ್ಕೆ ಉಪಯೋಗವಾಗುವಂತೆ ಉತ್ತಮ ರೀತಿಯಲ್ಲಿ ಆಚರಿಸಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಮನೋಜ್ ತಿಳಿಸಿದರು.
ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಈಚೆಗೆ ಕನ್ನಡ ಸಾಹಿತ್ಯ ಪರಿಷತ್‌ನಿಂದ ಆಯೋಜಿಸಿದ್ದ ದತ್ತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಆಧುನಿಕತೆಯ ಪ್ರಭಾವಕ್ಕೆ ಒಳಗಾಗಿ ಮನುಷ್ಯ ಸ್ವಂತಿಕೆಯನ್ನು ಕಳೆದುಕೊಳ್ಳುತ್ತಿರುವ ಇಂದಿನ ದಿನಗಳಲ್ಲಿ ಸಾಹಿತ್ಯ ಕಾರ್ಯಕ್ರಮಗಳು ಮಾನವೀಯ ಸಂಬಂಧಗಳನ್ನು ಬೆಸೆಯುವಲ್ಲಿ ಸಹಕಾರಿಯಾಗಿವೆ. ಜಿಲ್ಲೆಯಲ್ಲಿನ ದತ್ತಿ ದಾನಿಗಳು ನೀಡಿದ ಕೊಡುಗೆಗಳು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳ ಉಸಿರು’ ಎಂದು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಕೊಡ್ಲ ಯಜ್ಞ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಎನ್. ಕೃಷ್ಣಪ್ಪ, ಬಿ.ಎಸ್.ರಾಜೇಶ್, ಕೋಶ ಅಧ್ಯಕ್ಷ ಶ್ರೀನಿವಾಸ್, ಸಿದ್ಧಾರ್ಥ ಅಂದರ ಕೇಂದ್ರದ ಅಧ್ಯಕ್ಷ ಬಸಪ್ಪ, ಜಾನಪದ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಆರ್.ರೇವಣಪ್ಪ, ದತ್ತಿದಾನಿ ಶ್ರೀನಿವಾಸ್, ಮನೋಜ್, ಕಮಲಾಕರ, ನಾಗೋಜಿ ರಾವ್, ಕೇತು ಪ್ರಸನ್ನ ಉಪಸ್ಥಿತರಿದ್ದರು.
ಸಿದ್ಧಾರ್ಥ ಶಾಲೆಯ ಅಂಧ ಮಕ್ಕಳಿಂದ ಗಾಯನ ಕಾರ್ಯಕ್ರಮ ಜರುಗಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.