ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಗರ: ಚೆಕ್ ಅಮಾನ್ಯ ಪ್ರಕರಣ: ತಾ.ಪಂ. ಮಾಜಿ ಅಧ್ಯಕ್ಷಗೆ ಶಿಕ್ಷೆ

Last Updated 5 ಫೆಬ್ರವರಿ 2023, 6:32 IST
ಅಕ್ಷರ ಗಾತ್ರ

ಸಾಗರ: ಇಲ್ಲಿನ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಚ್.ಮಹಾಬಲೇಶ್ವರ್ ಅವರಿಗೆ ಚೆಕ್ ಅಮಾನ್ಯ ಪ್ರಕರಣದಲ್ಲಿ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಶನಿವಾರ ಶಿಕ್ಷೆ ವಿಧಿಸಿದೆ.

ನಗರಸಭೆಯ ನಿವೃತ್ತ ಕಂದಾಯ ಅಧಿಕಾರಿ ಎಸ್.ಬಿ.ರಘುನಾಥ್ ಅವರಿಂದ ಮಹಾಬಲೇಶ್ವರ್ 2016ನೇ ಸಾಲಿನಲ್ಲಿ ₹ 6 ಲಕ್ಷ ಹಣವನ್ನು ಸಾಲವಾಗಿ ಪಡೆದಿದ್ದರು. ನಿಗದಿತ ಅವಧಿಯಲ್ಲಿ ಸಾಲ ಮರು ಪಾವತಿಸದೆ ನಂತರ ಸಾಲ ತಿರುವಳಿಗಾಗಿ ಅವರು ನೀಡಿದ್ದ ಚೆಕ್ ಬೌನ್ಸ್ ಆಗಿತ್ತು.

ಈ ಸಂಬಂಧ ಎಸ್.ಬಿ.ರಘುನಾಥ್ ಇಲ್ಲಿನ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ನ್ಯಾಯಾಧೀಶರಾದ ಶ್ರೀಶೈಲ ಭೀಮಸೇನ ಬಗಾಡಿ ಅವರು ದೂರುದಾರರಾದ ರಘನಾಥ್ ಅವರಿಗೆ ಮಹಾಬಲೇಶ್ವರ್ ₹ 6 ಲಕ್ಷ ನೀಡುವ ಜೊತೆಗೆ ₹ 1.50 ಲಕ್ಷ ದಂಡವಾಗಿ ಪಾವತಿಸಬೇಕು. ತಪ್ಪಿದಲ್ಲಿ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕು ಎಂದು ತೀರ್ಪು ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT