ಮಂಗಳವಾರ, ಅಕ್ಟೋಬರ್ 20, 2020
23 °C

ಅತಿವೃಷ್ಟಿ ಕಡಿಮೆಯಾಗಿ ಸಮೃದ್ಧ ಬೆಳೆ ದೊರಕಲಿ: ಬಿ.ಎಸ್.ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಉತ್ತರ ಕರ್ನಾಟಕದಲ್ಲಿ ದೇವರ ದಯೆಯಿಂದ ಅತಿವೃಷ್ಟಿ ಕಡಿಮೆಯಾಗಿ ಸಮೃದ್ಧ ಬೆಳೆ ದೊರಕಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಾರ್ಥಿಸಿದರು.

ಶಿಕಾರಿಪುರದಲ್ಲಿ ಭಾನುವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಕರ್ನಾಟಕಕ್ಕೆ ಹೆಚ್ಚಿನ ನೆರವು ನೀಡುವ ಭರವಸೆ ನೀಡಿದ್ದಾರೆ. ಅಲ್ಲಿನ ಜನರ ಜತೆ ರಾಜ್ಯ ಸರ್ಕಾರ ಇರುತ್ತದೆ ಎಂದರು.

ಶಿರಾ ಹಾಗೂ ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ಶಿರಾದಲ್ಲಿ ಮೊದಲು ಗೆಲುವಿನ ನಂಬಿಕೆ ಇರಲಿಲ್ಲ. ಪುತ್ರ ವಿಜಯೇಂದ್ರ ಅಲ್ಲೇ ಠಿಕಾಣಿ ಹೂಡಿದ್ದಾರೆ. ಅವರ ಮುಂದಾಳತ್ವದಲ್ಲಿ ಚುನಾವಣೆ ನಡೆಯುತ್ತಿದೆ. ಭಾರಿ ಮತಗಳ ಅಂತರದಿಂದ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು