ಬುಧವಾರ, ಅಕ್ಟೋಬರ್ 28, 2020
28 °C

ದೇವರ ಹೆಸರಿನಲ್ಲಿ ಗಲಾಟೆ ಯಾರಿಗೂ ಶೋಭೆ ತರುವುದಿಲ್ಲ: ಬಿ.ಎಸ್‌.ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಶ್ರೀ ಕ್ಷೇತ್ರ ಸಿಂಗಧೂರು ಚೌಡೇಶ್ವರಿ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಸೇರಿಸಬೇಕೋ, ಬೇಡವೋ ಎಂಬ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

ನೀರಾವರಿ ಯೋಜನೆ ಕಾಮಗಾರಿಗೆ ಚಾಲನೆ ಸಂಬಂಧ ಭಾನುವಾರ ಶಿಕಾರಿಪುರಕ್ಕೆ ಆಗಮಿಸಿದ್ದ ವೇಳೆ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ದೇವರ ಹೆಸರಿನಲ್ಲಿ ಗಲಾಟೆ ಮಾಡುವುದು ಯಾರಿಗೂ ಶೋಭೆ ತರೊಲ್ಲ. ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಸೇರಿಸಬೇಕೆಂಬ ಕೂಗು ಹೆಚ್ಚಾಗಿದೆ. ದೇವಸ್ಥಾನದಲ್ಲಿ ನಡೆದ ಘಟನೆಯೂ ಗಮನಕ್ಕೆ ಬಂದಿದೆ. ಸಾಗರ ಶಾಸಕ  ಹರತಾಳ ಹಾಲಪ್ಪ ಹಾಗೂ ಸೊರಬ ಶಾಸಕ ಕುಮಾರ ಬಂಗಾರಪ್ಪ ಅವರೊಂದಿಗೆ ಚರ್ಚಿಸಿ, ಮುಜರಾಯಿ ಇಲಾಖೆಗೆ ಸೇರಿಸಬೇಕೊ, ಬೇಡ ಎಂಬ ಬಗ್ಗೆ ತೀರ್ಮಾಣ ಮಾಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಉಪಾಚುನಾವಣೆಯಲ್ಲಿ ಗೆಲ್ತೇವೆ: ಶಿರಾ ಮತ್ತು ಆರ್.ಆರ್. ನಗರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ನೂರಕ್ಕೆ ನೂರು ಗೆಲ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಎರಡೂ ಉಪಚುನಾವಣೆಯಲ್ಲಿ ದೊಡ್ಡ ಅಂತರದಲ್ಲಿ ಗೆಲ್ಲುವ ಬಗ್ಗೆ ಯೋಚನೆ ಮಡುತ್ತಿದ್ದೇವೆ. ಮೂರು ದಿನದಿಂದ ವಿಜಯೇಂದ್ರ ಶಿರಾದಲ್ಲೇ ಇದ್ದಾರೆ. ವಿಜಯೇಂದ್ರ ನೇತೃತ್ವದಲ್ಲಿ ಶಿರಾ ಕ್ಷೇತ್ರದಲ್ಲೂ ಬಿಜೆಪಿ ಗೆದ್ದುಬರಲಿದೆ ಎಂದರು.

ಇವನ್ನೂ ಓದಿ...

ಸಿಗಂದೂರು ಕಲಹ: ಜಿಲ್ಲಾಡಳಿತ ಮಧ್ಯ ಪ್ರವೇಶ

ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರ ಸಹೋದರನಿಂದ ಹಲ್ಲೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು