ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಬದಲಾವಣೆ ಪಕ್ಷದ ವರಿಷ್ಠರಿಗೆ ಬಿಟ್ಟದ್ದು: ಕೋಟ ಶ್ರೀನಿವಾಸ ಪೂಜಾರಿ 

Last Updated 21 ಜುಲೈ 2021, 11:46 IST
ಅಕ್ಷರ ಗಾತ್ರ

ಶಿವಮೊಗ್ಗ: ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷದ ವರಿಷ್ಠರು ನಿರ್ಧಾರ ತೆಗೆದುಕೊಳ್ಳುವರು. ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ನಗರದಲ್ಲಿ ಬುಧವಾರ ಅವರು ಸುದ್ದಿಗಾರರ ಜತೆ ಮಾತನಾಡಿ, ‘ಆಡಳಿತ, ಅಭಿವೃದ್ಧಿ ಕೆಲಸವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೋಡಿಕೊಳ್ಳುತ್ತಿದ್ದಾರೆ. ಸಚಿವರಾಗಿ ನಮ್ಮ ಮುಂದೆ ಇರುವುದು ಅಭಿವೃದ್ಧಿ ವಿಷಯ ಮಾತ್ರ. ಅಭಿವೃದ್ಧಿ ಹಾಗೂ ಕೊರೊನಾ ನಿಯಂತ್ರಣಕ್ಕೆ ಗಮನಹರಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಅವರ ಆಶಯದಂತೆ ಕೆಲಸ ನಿರ್ವಹಿಸುತ್ತಿದ್ದೇವೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಬದಲಾವಣೆ ಕುರಿತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‌, ರಾಜ್ಯ ಉಸ್ತುವಾರಿ ಅರುಣ್ ಸಿಂಗ್‌, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಕೇಳಬೇಕು. ಅಂತಹ ಯಾವ ಮಾಹಿತಿಯೂ ತಮ್ಮ ಬಳಿ ಇಲ್ಲ. ವಿವಿಧ ಮಠಾಧೀಶರು ಯಡಿಯೂರಪ್ಪ ಅವರನ್ನೇ ಮುಂದುವರಿಸಲು ಒತ್ತಾಯಿಸುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅನಿಸಿಕೆ ವ್ಯಕ್ತಪಡಿಸಲು ಅವಕಾಶವಿದೆ ಎಂದು ಪ್ರತಿಕ್ರಿಯಿಸಿದರು.

ಬಿ.ಎಸ್‌.ಯಡಿಯೂರಪ್ಪ ಪಕ್ಷವನ್ನು ಸದೃಢವಾಗಿ ಕಟ್ಟಿದ ಧೀಮಂತ ನಾಯಕ. ಬಡವರ ನಾಡಿಮಿಡಿತ ಗೊತ್ತಿದೆ. ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಲ್ಲಿ ಮುಂದುವರಿಸಿ ಎಂದು ಕಾಂಗ್ರೆಸ್ ನಾಯಕರ ಒತ್ತಾಯ ಪಕ್ಷದ ಕಾರ್ಯಸೂಚಿ ಅಲ್ಲ. ಬಿಜೆಪಿ ವರಿಷ್ಠರ ನಿರ್ಧಾರವೇ ಅಂತಿಮ. ಎಲ್ಲ ಬೆಳವಣಿಗೆ ಗಮನಿಸುತ್ತಿದ್ದಾರೆ ಎಂದರು.

‘ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಎಲ್ಲರೂ ಬಾಯಿಮುಚ್ಚಿಕೊಂಡು ಇರಬೇಕು. ಅನಗತ್ಯವಾಗಿ ಮಾತನಾಡಿದರೆ ಪಕ್ಷ, ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗುತ್ತದೆ. ಏನು ಮಾಡಬೇಕು, ಮಾಡಬಾರದು ಎಂದು ಹೈಕಮಾಂಡ್‌ ನಿರ್ಧರಿಸುತ್ತದೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT