ರಿಪ್ಪನ್ಪೇಟೆ: ಯೇಸು ಕ್ರೈಸ್ತರ ಆದರ್ಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಗುಡ್ ಶಫರ್ಡ್ ಚರ್ಚ್ನ ಧರ್ಮ ಗುರು ಫಾದರ್ ಬಿನೋಯ್ ಹೇಳಿದರು.

ಪಟ್ಟಣದಲ್ಲಿನ ಗುಡ್ ಶಫರ್ಡ್ ಚರ್ಚ್ನಲ್ಲಿ ನಡೆದ ಕ್ರಿಸ್ಮಸ್ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರತಿಯೊಬ್ಬರ ಹೃದಯದಲ್ಲಿ ಯೇಸು ಜನಿಸಬೇಕು. ಇರುವವರು ಇಲ್ಲದವರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಬೇಕು. ಅಪರೂಪ ಕಾರ್ಯದ ಮೂಲಕ ಸಮಾಜಮುಖಿ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಎಲ್ಲರ ನಡುವೆ ಐಕ್ಯತೆ, ಸಮಾನತೆ ಮೂಡಲಿ ವಿಶ್ವದಲ್ಲಿ ಶಾಂತಿ ನೆಲೆಸಲಿ ಎಂದು ಆಶಿಸಿದರು.

ಅರಸಾಳು ಗ್ರಾಮದ ಫಾತಿಮಾ ಚರ್ಚ್ನಲ್ಲಿ ನಿರ್ಮಾಣ ಮಾಡಲಾದ ಕ್ರಿಸ್ಮಸ್ ಟ್ರೀ, ವಿವಿಧ ರೀತಿಯ ನಕ್ಷತ್ರಗಳು, ಯೇಸುವಿನ ಜನನ ಸಂದರ್ಭ ನೆನಪಿಸುವ ಗೋದಲಿ ಗಮನ ಸೆಳೆದವು.

ಮಂಗಳವಾರ ಮಧ್ಯರಾತ್ರಿ ಹಾಗೂ ಬುಧವಾರ ಮುಂಜಾನೆ ಕ್ರೈಸ್ತ ಧರ್ಮೀಯರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕ್ರಿಸ್ತನ ಜನನದ ಶುಭ ಗಳಿಗೆಯ ಸ್ಮರಣೆಯ ಸಂಕೇತವಾಗಿ ಭಕ್ತರು ಮೇಣದ ಬತ್ತಿಗಳನ್ನು ಬೆಳಗಿಸಿದರು.

ಪುಟ್ಟ ಮಕ್ಕಳು ಸಾಂತಾಕ್ಲಾಸ್ ವೇಷ ಧರಿಸಿ ಗಮನ ಸೆಳೆದರು. ಚರ್ಚ್ಗಳಲ್ಲಿ ಕೇಕ್, ಚಾಕೊಲೇಟ್, ಸಿಹಿ ತಿಂಡಿ ವಿತರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.