ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರಕಾರ್ಮಿಕರ ಸೇವೆಗೆ ಬೆಲೆ ಕಟ್ಟಲು ಆಗದು: ಹಾಲಪ್ಪ

ಶಾಸಕ ಎಚ್. ಹಾಲಪ್ಪ ಹರತಾಳು
Last Updated 30 ಸೆಪ್ಟೆಂಬರ್ 2021, 3:14 IST
ಅಕ್ಷರ ಗಾತ್ರ

ಸಾಗರ: ಪ್ರತಿದಿನ ಬೆಳಿಗ್ಗೆ ಸೂರ್ಯ ಉದಯಿಸುವ ಮುನ್ನ ಊರಿನ ಸ್ವಚ್ಛತೆ ಕಾರ್ಯದಲ್ಲಿ ಪಾಲ್ಗೊಳ್ಳುವ ಪೌರಕಾರ್ಮಿಕರ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಶಾಸಕ ಎಚ್. ಹಾಲಪ್ಪ ಹರತಾಳು ಹೇಳಿದರು.

ನಗರಸಭೆ ರಂಗಮಂದಿರದಲ್ಲಿ ಬುಧವಾರ ನಡೆದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

‘ಪೌರಕಾರ್ಮಿಕರ ಶ್ರಮಕ್ಕೆ ತಕ್ಕ ಪ್ರತಿಫಲ ದೊರಕಿಸಲು ಸದನದ ಹೊರಗೆ ಮತ್ತು ಒಳಗೆ ಶ್ರಮಿಸುತ್ತೇನೆ.ಸಾಗರ ನಗರಸಭೆಗೆ ಮೊದಲಿನಿಂದಲೂ ಉತ್ತಮ ಹೆಸರು ಇದೆ. ಆದರೆ ಕೆಲವರು ನಡೆಸಿರುವ ಆಶ್ರಯ ನಿವೇಶನಗಳ ನಕಲಿ ಹಕ್ಕುಪತ್ರ ಹಗರಣದಿಂದ ಆಡಳಿತಕ್ಕೆ ಕಪ್ಪುಚುಕ್ಕೆ ಉಂಟಾಗಿದೆ. ಈ ಸಂಬಂಧ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಮೂಲಕ ನಗರಸಭೆ ಆಡಳಿತಕ್ಕೆ ಅಂಟಿರುವ ಕಳಂಕವನ್ನು ತೊಡೆದು ಹಾಕಲಾಗುವುದು’ ಎಂದರು.

‘ಗಾಂಧಿ ಮೈದಾನದಲ್ಲಿ ನಿರ್ಮಿಸಿರುವ ಚಾವಣಿಯನ್ನು ಬಳಸಿಕೊಂಡು ಯಾವುದೇ ಸಂಘ–ಸಂಸ್ಥೆಗಳು ಕಾರ್ಯಕ್ರಮ ನಡೆಸಬಹುದು. ಆದರೆ ಕೆಲವರು ಈ ಪ್ರದೇಶವನ್ನು ಬಿಜೆಪಿ ಕಚೇರಿಯನ್ನಾಗಿ ಮಾರ್ಪಡಿಸಲಾಗಿದೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಒಳ್ಳೆಯದನ್ನು ಮಾಡಲು ಸಾಧ್ಯವಾಗದಿದ್ದರೆ ಬೇರೆಯವರು ಮಾಡುವ ಒಳ್ಳೆಯ ಕೆಲಸವನ್ನು ಪ್ರಶಂಸಿಸಬೇಕೇ ಹೊರತು ಸಾರ್ವಜನಿಕರನ್ನು ತಪ್ಪು ಹಾದಿಗೆ ಎಳೆಯುವಂತಹ ಹೇಳಿಕೆ ನೀಡಬಾರದು’ ಎಂದು ಹೇಳಿದರು.

ಪೌರಕಾರ್ಮಿಕರಾದ ಚಿನ್ನತಂಬಿ, ಚೆಲುವರಾಜ, ಪರಮೇಶಿ, ಸಿದ್ದನಗೌಡ, ಮಂಜುನಾಥ ಅವರನ್ನು ಸನ್ಮಾನಿಸಲಾಯಿತು.

ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ವಿ. ಮಹೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಡಿ. ತುಕಾರಾಮ್, ಪೌರ ಸೇವಾ ನೌಕರರ ಸಂಘದ ಅಧ್ಯಕ್ಷ ಎಚ್.ಕೆ. ನಾಗಪ್ಪ, ಉಪಾಧ್ಯಕ್ಷ ನಾಗರಾಜ್, ಪೌರಾಯುಕ್ತ ರಾಜು ಡಿ.ಬಣಕಾರ್ ಇದ್ದರು. ರಚನಾ ಪ್ರಾರ್ಥಿಸಿದರು. ಕೆ.ಆರ್. ಗಣೇಶ್ ಪ್ರಸಾದ್ ಸ್ವಾಗತಿಸಿದರು. ಸಂತೋಷ್ ಶೇಟ್ ವಂದಿಸಿದರು. ಹಬೀಬ್ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT