ಶುಕ್ರವಾರ, ನವೆಂಬರ್ 27, 2020
18 °C

ಸಿಗಂದೂರು ದೇವಸ್ಥಾನ ಸರ್ಕಾರದ ವಶಕ್ಕೆ ಪಡೆಯುವುದಿಲ್ಲ: ಯಡಿಯೂರಪ್ಪ ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಸಾಗರ ತಾಲ್ಲೂಕು ಸಿಗಂದೂರು ದೇವಸ್ಥಾನ ಸರ್ಕಾರದ ವಶಕ್ಕೆ ಪಡೆಯುವ ಇಚ್ಚೆ ಇಲ್ಲ. ಹಣಕಾಸು ನಿರ್ವಹಣೆಯಲ್ಲಿ ಪಾರದರ್ಶಕತೆ ತರಲು ಮೇಲ್ವಿಚಾರಣಾ ಸಮತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪತ್ರಿಕಾ ಭವನದ ಹೆಚ್ಚುವರಿ ಕಟ್ಟಡಗಳ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ದೇವಸ್ಥಾನಕ್ಕೆ ದೊಡ್ಡ ಪ್ರಮಾಣದಲ್ಲಿ ಆದಾಯ ಬರುತ್ತಿದೆ. ಭಕ್ತರು ದೇವಸ್ಥಾನಕ್ಕೆ ನೀಡುವ ಹಣ, ಚಿನ್ನ, ಆಭರಣಗಳನ್ನು ಲೆಕ್ಕ ಪತ್ರ ವ್ಯಾಪ್ತಿಗೆ ತರಬೇಕಿದೆ. ಹಣಕಾಸು ದುರುಪಯೋಗವಾಗದಂತೆ ತಡೆಯುವ ಜತೆಗೆ, ಸಮಿತಿಯು ಅಲ್ಲಿನ ವಾಸ್ತವಿಕ ಸ್ಥಿತಿಗತಿಗಳನ್ನು ಅವಲೋಕಿಸಲಿದೆ. ಸರ್ಕಾರಕ್ಕೆ ವರದಿ ನೀಡಲಿದೆ ಎಂದರು.

ಇದನ್ನೂ ಓದಿ... ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರ ಸಹೋದರನಿಂದ ಹಲ್ಲೆ

‘ಮಾಧ್ಯಮಗಳ ಮುಕ್ತ ಕಾರ್ಯನಿರ್ವಹಣೆಗೆ ಬದ್ಧ’
ಶಿವಮೊಗ್ಗ:
 ಮಾಧ್ಯಮಗಳ ಮುಕ್ತ ಕಾರ್ಯನಿರ್ವಹಣೆಗೆ ಸರ್ಕಾರ ಸದಾ ಬದ್ಧ. ಮಾಧ್ಯಮ, ಸರ್ಕಾರಗಳ ಮಧ್ಯೆ ಸಹಕಾರ ಇದ್ದರೆ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಕೊರೊನಾ ಸಂಕಷ್ಟದ ಮಧ್ಯೆ ಮಳೆ, ಪ್ರವಾಹದಿಂದ ಉತ್ತರ ಕರ್ನಾಟಕದ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಂತಹ ಸಮಯದಲ್ಲಿ ಸಂಕಷ್ಟಗಳಿಗೆ ಬೆನ್ನು ಮಾಡುವುದಿಲ್ಲ. ಆದರೆ, ಜನರಿಗೆ ನೋವು ನೀಡುವ ಇಂತಹ ಪರೀಕ್ಷೆ ಬೇಡ ಎಂದು ದೇವರಲ್ಲಿ ಪ್ರಾರ್ಥಿಸುವೆ. ರೈತರಿಗೆ ಕಷ್ಟ ಕೊಡಬೇಡ ಎಂದು ಬೇಡಿಕೊಳ್ಳುವೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು