ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯದರ್ಶಿಯೂ ಆಗಿರುವ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ ಅವರು ಶನಿವಾರ ಇಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ವೇಳೆ ಅಸ್ವಸ್ಥಗೊಂಡರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆದ ಸಭೆಯ ವೇಳೆ ಕಾವೇರಿ ಅವರು ಏಕಾಏಕಿ ಬಳಲಿಕೆಗೆ ಒಳಗಾದರು. ಸಭೆಯಲ್ಲಿದ್ದ ವಿಧಾನಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ತಕ್ಷಣ ಪ್ರಥಮ ಚಿಕಿತ್ಸೆ ನೀಡಿದರು.

ಕೆಲಹೊತ್ತು ಸಭಾಂಗಣದ ಕೊಠಡಿಯಲ್ಲಿ ವಿಶ್ರಾಂತಿ ಪಡೆದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದುರ್ಗಿಗುಡಿಯ ಸರ್ಜಿ ಆಸ್ಪತ್ರೆಗೆ ದಾಖಲಿಸಲಾಯಿತು.

‘ಅಧಿಕ ರಕ್ತದೊತ್ತಡ ಹಾಗೂ ಸೋಂಕಿನಿಂದ ಕಾವೇರಿ ಅವರು ಬಳಲಿದ್ದರು. ಅಗತ್ಯ ಚಿಕಿತ್ಸೆ ನೀಡಲಾಗಿದೆ. ಅವರು ಚೇತರಿಸಿಕೊಂಡಿದ್ದಾರೆ’ ಎಂದು ಡಾ.ಧನಂಜಯ ಸರ್ಜಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.