ಶಿಕಾರಿಪುರ: ‘ಹೆಚ್ಚು ಬಾರಿ ಬಜೆಟ್ ಮಂಡನೆ ಮಾಡುವುದು, ಸಿಎಂ ಕುರ್ಚಿಯಲ್ಲಿ ಹೆಚ್ಚು ದಿನ ಕೂತೆ ಎನ್ನುವ ದಾಖಲೆಯಲ್ಲ. ಬದಲಿಗೆ ರೈತರ ಸಮಸ್ಯೆ ಪರಿಹರಿಸಿ, ಕಣ್ಣೀರು ಒರೆಸುವುದರಲ್ಲಿ ಸಿ.ಎಂ. ಸಿದ್ದರಾಮಯ್ಯ ದಾಖಲೆ ಮಾಡಬೇಕು. ಆಗ ಅಧಿಕಾರಕ್ಕೊಂದು ಅರ್ಥ ಬರುತ್ತದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ತಹಶೀಲ್ದಾರ್ ಕಚೇರಿ ಎದುರು ಬಿಜೆಪಿ ರೈತ ಮೋರ್ಚಾ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.

‘ಬೆಳೆ ಪರಿಹಾರ ವಿತರಣೆ ಸಮರ್ಪಕವಾಗಿ ಮಾಡಿಲ್ಲ. ಹಾಲಿಗೆ ಪ್ರೋತ್ಸಾಹ ಧನ ವಿತರಿಸಿಲ್ಲ. ಮಳೆ ಮಾಪನ ಕೇಂದ್ರಗಳು ಕೆಟ್ಟಿರುವ ಕಾರಣಕ್ಕೆ ರೈತರಿಗೆ ಸಮರ್ಪಕವಾಗಿ ಪರಿಹಾರ ನೀಡಲು ಆಗುತ್ತಿಲ್ಲ. ರೈತರಿಗೆ ಈ ಹಿಂದೆ ₹25,000ದಿಂದ ₹30,000ಕ್ಕೆ ಸಿಗುತ್ತಿದ್ದ ಟ್ರಾನ್ಸ್ಫಾರ್ಮರ್ ಈಗ ₹2 ಲಕ್ಷದಿಂದ ₹3 ಲಕ್ಷ ನೀಡಿದರೂ ಸಿಗುತ್ತಿಲ್ಲ. ಗಂಗಾ ಕಲ್ಯಾಣ ಸೇರಿ ಹಲವು ಯೋಜನೆ ಅಡಿಯಲ್ಲಿ ಈ ಹಿಂದೆ ತಾಲ್ಲೂಕಿಗೆ 50 ರಿಂದ 100 ಬೋರ್ವೆಲ್ ಉಚಿತವಾಗಿ ನೀಡಲಾಗುತ್ತಿತ್ತು. ಈಗ ಅದು 5ರಿಂದ 10ಕ್ಕೆ ಇಳಿದಿದೆ’ ಎಂದು ತಿಳಿಸಿದರು.

‘ಗೃಹಲಕ್ಷ್ಮಿ ಹಣ ಖಾತೆಗೆ ಜಮೆ ಆಗುತ್ತಿಲ್ಲ. ಖಜಾನೆಯಲ್ಲಿ ಹಣ ಇಲ್ಲದಿರುವುದೇ ಈ ಎಲ್ಲ ಸಮಸ್ಯೆಗೆ ಕಾರಣ. ಈ ಎಲ್ಲ ವಾಸ್ತವ ಮರೆಮಾಚಲು ಕೇಂದ್ರ ಸರ್ಕಾರದ ಮೇಲೆ ಆಧಾರರಹಿತ ಆರೋಪ ಮಾಡಿ ತಮ್ಮ ಬೇಳೆ ಬೇಯಿಸಿಕೊಳ್ಳುವ ಕೆಲಸವನ್ನು ಕಾಂಗ್ರೆಸ್ ಮುಖಂಡರು ಮಾಡುತ್ತಿದ್ದಾರೆ. ಜನವಿರೋಧಿ, ರೈತ ವಿರೋಧಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವನ್ನು ಕಿತ್ತೆಸೆಯುವ ನಿರ್ಣಯವನ್ನು ಜನರು ಕೈಗೊಳ್ಳಬೇಕು’ ಎಂದರು.

‘ಜಿಲ್ಲೆಯಲ್ಲಿ ಲಕ್ಷಾಂತರ ಅಡಿಕೆ ಗಿಡ ನೆಲಕ್ಕುರುಳಿವೆ. ₹860 ಕೋಟಿ ಹಾಲಿನ ಪ್ರೋತ್ಸಾಹ ಧನ ವಿತರಿಸಿಲ್ಲ. ರಾಜ್ಯದ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಕೆ ಮಾಡುವ ಭರವಸೆಯನ್ನು ಕೇಂದ್ರ ಸರ್ಕಾರ ನೀಡಿದ್ದರೂ ಕೃಷಿ ಸಚಿವರು ರಸಗೊಬ್ಬರ ಕೊರತೆ ಆಗಲಿದೆ ಎಂದು ಹೇಳುವ ಮೂಲಕ ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಲು ಮುಂದಾಗಿದ್ದಾರೆ’ ಎಂದು ಆರೋಪಿಸಿದರು.

‘ಬಿ.ಎಸ್.ಯಡಿಯೂರಪ್ಪ ಮುಖ್ಯ ಮಂತ್ರಿ ಆಗಿದ್ದಾಗ ಎನ್ಡಿಆರ್ಎಫ್ ನಿಯಮ ಮೀರಿ ನೆರೆ ಸಂತ್ರಸ್ತರಿಗೆ ಪರಿಹಾರ ನೀಡಲಾಗಿತ್ತು. ಅದರಂತೆ ಅಡಿಕೆ ಮರ ನಾಶಗೊಂಡ ರೈತರಿಗೆ ಉತ್ತಮ ಪರಿಹಾರ ನೀಡಬೇಕು’ ಎಂದು ಸಂಸದ ಬಿ.ವೈ.ರಾಘವೇಂದ್ರ ಒತ್ತಾಯಿಸಿದರು.

ಬಿಜೆಪಿ ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ನಿಂಬೆಗೊಂದಿ ಸಿದ್ಧಲಿಂಗಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ಯೋಗೀಶಪ್ಪ ಹುಲ್ಲಿನಕೊಪ್ಪ, ಮುಖಂಡರಾದ ಕೆ.ಎಸ್.ಗುರುಮೂರ್ತಿ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಹನುಮಂತಪ್ಪ ಸಂಕ್ಲಾಪುರ, ಮುಖಂಡರಾದ ಹುಲ್ಮಾರ್ ಮಹೇಶ್, ಸತೀಶ್ ತಾಳಗುಂದ, ಗುರುರಾಜ್, ಜಗದೀಶ್, ಗಿರೀಶ್ ಧಾರವಾಡ, ಅಶೋಕ್ ಮಾರವಳ್ಳಿ, ಚನ್ನವೀರಪ್ಪ, ಹನುಮಂತಪ್ಪ ತೊಗರ್ಸಿ, ರೈತ ಮೋರ್ಚಾ, ಮಹಿಳಾ ಮೋರ್ಚಾ, ಯುವ ಮೋರ್ಚಾ ಎಸ್ಸಿ, ಎಸ್ಟಿ ಮೋರ್ಚಾ ಪದಾಧಿಕಾರಿಗಳು, ರೈತರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-42-956908441

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.