ಶುಕ್ರವಾರ, ಫೆಬ್ರವರಿ 26, 2021
30 °C

ಗರ್ಭಿಣಿ ಶುಶ್ರೂಷಕಿಗೆ ಸಿಎಂ ಅಭಿನಂದನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: 9 ತಿಂಗಳ ಗರ್ಭಿಣಿಯಾಗಿದ್ದರೂ ಕರ್ತವ್ಯಕ್ಕೆ ನಿತ್ಯವೂ ಹಾಜರಾಗುತ್ತಿದ್ದ ತೀರ್ಥಹಳ್ಳಿ ಜಯಚಾಮರಾಜೇಂದ್ರ ಸಾರ್ವಜನಿಕ ಆಸ್ಪತ್ರೆಯ ಶುಶ್ರೂಷಕಿ ರೂಪಾ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದೂರವಾಣಿ ಮೂಲಕ ಅಭಿನಂಧನೆ ಸಲ್ಲಿಸಿದ್ದಾರೆ.

ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ರೂಪಾ ಅವರು ರಜೆ ತೆಗೆದುಕೊಳ್ಳದೇ ನಿತ್ಯವೂ 50 ಕಿ.ಮೀ.ದೂರದ ಗಾಜನೂರಿನಿಂದ ಬಸ್‌ನಲ್ಲಿ ಸಂಚರಿಸುತ್ತಾ ಕೊರೊನಾ ವಾರಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ. ಅವರ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ, ‘ನಮ್ಮ ಜಿಲ್ಲೆಯವರಾಗಿ ನಿಮ್ಮ ಸೇವೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ತಕ್ಷಣವೇ ರಜೆ ತೆಗೆದುಕೊಳ್ಳಿ. ಮುಂದೆ ನೋಡೋಣ’ ಎಂದು ಪ್ರೋತ್ಸಾಹದ ಮಾತುಗಳನ್ನು ಹೇಳಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು