ಶನಿವಾರ, ಸೆಪ್ಟೆಂಬರ್ 18, 2021
30 °C

ಪೌರಕಾರ್ಮಿಕರ ಸಮಸ್ಯೆ ಪರಿಹರಿಸಲು ಬದ್ಧ: ಹೇಮಂತ್ ಡೊಳ್ಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಾಳಕೊಪ್ಪ:  ಕೊರೊನಾ ಸಂಕಷ್ಟದ ಈ ಕಾಲಘಟ್ಟದಲ್ಲಿ ಪೌರಕಾರ್ಮಿಕರು ಆತಂಕ ಪಡದೆ ಕೆಲಸ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಹೇಮಂತ್ ಡೊಳ್ಳೆ ಹೇಳಿದರು.

ಪೌರಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಪಟ್ಟಣ ಪಂಚಾಯಿತಿಯಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ
ಮಾತನಾಡಿದರು.

ಪಟ್ಟಣ ಪಂಚಾಯಿತಿ ಸದಸ್ಯರಾದ ಮಕ್ಬೂಲ್ ಸಾಬ್ ಹಾಗೂ ಅನಿಲ್ ಸುರಹೊನ್ನೆ, ‘ಪೌರಕಾರ್ಮಿಕರು ತಮ್ಮ ಸಮಸ್ಯೆಯನ್ನು ಮುಕ್ತವಾಗಿ ಹಂಚಿಕೊಂಡರೆ ಪರಿಹರಿಸುವ ಕೆಲಸ ಮಾಡುತ್ತೇವೆ’ ಎಂದು ತಿಳಿಸಿದರು.

ಪೌರಕಾರ್ಮಿಕ ಸಂಘದ ಅಧ್ಯಕ್ಷ ಕೆಂಪೆಗೌಡ್ರು, ಉಪಾಧ್ಯಕ್ಷ ಪ್ರಕಾಶ್, ಎಂಜಿನಿಯರ್ ಶೇಖರ್ ಭಾಗವಹಿಸಿದ್ದರು. ಆರೋಗ್ಯ ನಿರೀಕ್ಷಕ ನವಾಜ್ ನಿರೂಪಿಸಿದರು. ಚಂಪಾ ಸ್ವಾಗತಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು