ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭದ್ರಾ ಜಲಾಶಯದ ಕಾಮಗಾರಿ ತನಿಖೆಗೆ ಸಮಿತಿ: ಸಚಿವ ಈಶ್ವರಪ್ಪ

Last Updated 6 ಜುಲೈ 2021, 3:24 IST
ಅಕ್ಷರ ಗಾತ್ರ

ಶಿವಮೊಗ್ಗ:ಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ ಕೆಳಗೆವಿಶ್ವಬ್ಯಾಂಕ್ ನೆರವಿನಿಂದ ₹ 7 ಕೋಟಿ ವೆಚ್ಚದಲ್ಲಿ ನಡೆದ ಕಾಮಗಾರಿಯ ಗುಣಮಟ್ಟದ ಬಗ್ಗೆ ಪರಿಶೀಲಿಸಿ ವರದಿ ನೀಡಲು ಮೂವರು ನಿವೃತ್ತ ಮುಖ್ಯ ಎಂಜಿನಿಯರ್‌ಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಬಿ.ಆರ್. ಪ್ರಾಜೆಕ್ಟ್‌ ಬಳಿ ಸೋಮವಾರ ಭದ್ರಾ ಜಲಾಶಯ ವೀಕ್ಷಿಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ನಿವೃತ್ತ ಎಂಜಿನಿಯರ್‌ಗಳಾದ ಚಲುವರಾಜ್, ಶಿವಪ್ರಸಾದ್ ಹಾಗೂ ರೂಪನಗುಡಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ. 2016ರಿಂದ 2018ರವರೆಗೆ ನಡೆದಿದ್ದ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರೈತ ಮುಖಂಡರು ಆರೋಪಿಸಿದ್ದರು. ಕಾಮಗಾರಿ ಕಳಪೆ ಮಾಡಲಾಗಿದೆಯೇ? ಪ್ರಕೃತಿ ವಿಕೋಪದಿಂದ ಹಾಳಾಗಿದೆಯೇ? ಎನ್ನುವ ಕುರಿತು ಸಮಿತಿ ತನಿಖೆ ನಡೆಸಲಿದೆ. ಅವ್ಯವಹಾರದ ಕಾರಣ ಕಾಮಗಾರಿ ಕಳಪೆಯಾಗಿದ್ದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಸದ್ಯ ಅಚ್ಚುಕಟ್ಟು ಪ್ರದೇಶದ ಬೆಳೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳ ಲಾಗುವುದು. ಜುಲೈ 15ರ ವೇಳೆಗೆ ನಾಲೆಗಳಿಗೆ ನೀರು ಹರಿಸಲಾಗುವುದು ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT