ಶಿವಮೊಗ್ಗ: ‘ಶ್ರದ್ದೆ, ಸಂಕಲ್ಪ, ಶಿಸ್ತು ಇದ್ದರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಬಹುದು’ ಎಂದು ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ 421ನೇ ರ್ಯಾಂಕ್ ಪಡೆದ ಬಿ.ಎಂ.ಮೇಘನಾ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ನಮ್ಮ ಭಾಷೆ, ಪ್ರಾದೇಶಿಕತೆ, ಸಂಸ್ಕೃತಿಯು ನಮ್ಮನ್ನು ಹೊಸತನದಡೆಗೆ ಕೊಂಡೊಯ್ಯುತ್ತದೆ. ವಿದ್ಯಾರ್ಥಿಗಳು ಕೆಟ್ಟ ಆಕರ್ಷಣೆಗಳಿಂದ ದೂರ ಇರಬೇಕು’ ಎಂದರು.

ದೇಶೀಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಮಾತನಾಡಿ, ‘ಡಿವಿಎಸ್ ಸಂಸ್ಥೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಅಧ್ಯಯನ ನಡೆಸಿದ್ದು, ರಾಜ್ಯ, ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪೂರಕವಾದ ಕಾರ್ಯಕ್ರಮವನ್ನು ಸಂಸ್ಥೆ ಆಯೋಜಿಸಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ’ ಎಂದು ತಿಳಿಸಿದರು.

ವಿಶೇಷ ಉಪನ್ಯಾಸ ನೀಡಿದ ಪ್ರಾಧ್ಯಾಪಕ ಎಂ.ಇ. ಶಿವಕುಮಾರ ಹೊನ್ನಾಳಿ, ‘ಸಾಹಿತ್ಯ ಕ್ಷೇತ್ರದಲ್ಲಿ ಯುವಜನ ಆಸಕ್ತಿ ಬೆಳೆಸಿಕೊಳ್ಳಬೇಕು. ಸಾಹಿತ್ಯ ಕೃತಿಗಳನ್ನು ಅಧ್ಯಯನ ಮಾಡುವುದರಿಂದ ಜ್ಞಾನ ವೃದ್ಧಿಯಾಗುತ್ತದೆ’ ಎಂದು ಹೇಳಿದರು.

ದೇಶೀಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ, ಉಪಾಧ್ಯಕ್ಷ ಎಸ್.ಪಿ.ದಿನೇಶ್, ಸಹ ಕಾರ್ಯದರ್ಶಿ ಎ.ಸತೀಶ್ಕುಮಾರ್ ಶೆಟ್ಟಿ, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಎಂ.ವೆಂಕಟೇಶ್, ಐಕ್ಯೂಎಸಿ ಸಂಯೋಜಕ ಪ್ರೊ.ಎನ್.ಕುಮಾರಸ್ವಾಮಿ, ಪ್ರೊ.ಎಸ್.ಡಿ.ಉಮೇಶ್, ಪ್ರೊ. ಶಂಕರನಾರಾಯಣ ಶಾಸ್ತ್ರಿ, ವತ್ಸಲಾ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.