ಸೋಮವಾರ, ಸೆಪ್ಟೆಂಬರ್ 26, 2022
22 °C

ಹಕ್ಕುಪತ್ರ ವಿತರಿಸಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿಕಾರಿಪುರ:  ಅರಣ್ಯಭೂಮಿ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಸಬೇಕು ಎಂದು ಒತ್ತಾಯಿಸಿ ಅರಣ್ಯಭೂಮಿ ಸಾಗುವಳಿದಾರರ ಹೋರಾಟ ಸಮಿತಿ ನೇತೃತ್ವದಲ್ಲಿ ಅರಣ್ಯಭೂಮಿ ಸಾಗುವಳಿದಾರರು ಬುಧವಾರ ಪಾದಯಾತ್ರೆ ನಡೆಸಿದರು.

ತಾಲ್ಲೂಕಿನ ಸಾಲೂರು ಗ್ರಾಮದಿಂದ ತಾಲ್ಲೂಕು ಕಚೇರಿವರೆಗೆ ರೈತರು ಮೆರವಣಿಗೆ ನಡೆಸಿದರು.

ತಾಲ್ಲೂಕಿನಲ್ಲಿ ಹಲವು ವರ್ಷಗಳಿಂದ ಸಾವಿರಾರು ರೈತರು ಅರಣ್ಯ ಭೂಮಿಯಲ್ಲಿ ರೈತರು ಸಾಗುವಳಿ ಮಾಡಿ ಜೀವನ ನಡೆಸುತ್ತಿದ್ದಾರೆ. ಸಾಗುವಳಿದಾರರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಒಕ್ಕಲೆಬ್ಬಿಸುತ್ತಿದ್ದಾರೆ. ನ್ಯಾಯಾಲಯದಿಂದ ನೋಟಿಸ್ ನೀಡುತ್ತಿದ್ದಾರೆ. ಕೆಲವು ರೈತರ ಮೇಲೆ ಮೊಕದ್ದಮೆ ದಾಖಲಿಸಿದ್ದಾರೆ ಎಂದು ನೇತೃತ್ವ ವಹಿಸಿದ್ದ ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಅಧ್ಯಕ್ಷ ರಾಘವೇಂದ್ರನಾಯ್ಕ ಆರೋಪಿಸಿದರು.

ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಸಾಗುವಳಿದಾರರಿಗೆ ಹಕ್ಕುಪತ್ರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಿದರು.

ತಹಶೀಲ್ದಾರ್ ಎಂ.ಪಿ. ಕವಿರಾಜ್ ಅವರಿಗೆ ಮನವಿ ಸಲ್ಲಿಸಲಾಯಿತು. 

ಅರಣ್ಯಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಪದಾಧಿಕಾರಿಗಳಾದ ಶೇಖರನಾಯ್ಕ, ಕುಮಾರನಾಯ್ಕ, ಮಲ್ಲಿಕನಾಯ್ಕ, ಮಂಜುನಾಯ್ಕ, ಪ್ರೇಮ್ ಕುಮಾರನಾಯ್ಕ, ಚಂದ್ರುನಾಯ್ಕ, ಬನ್ನೂರು ಚರಣ್, ಅನಿಲ್, ಪುಟ್ಟ, ಗಿರೀಶ್, ಗೋಪಿಕೃಷ್ಣ, ಅಹಮದ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು