ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ವಿರುದ್ಧದ ಹೇಳಿಕೆಗೆ ಖಂಡನೆ

Last Updated 15 ಡಿಸೆಂಬರ್ 2022, 6:10 IST
ಅಕ್ಷರ ಗಾತ್ರ

ಸಾಗರ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಧ್ಯಪ್ರದೇಶದ ಕಾಂಗ್ರೆಸ್ ಮುಖಂಡ ರಾಜ ಪಟೇರಿಯ ಅವರು ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಸಾಗರದ ಉಪವಿಭಾಗಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

‘ಸಂವಿಧಾನವನ್ನು ಉಳಿಸುವ ಸಲುವಾಗಿ ಮೋದಿಯವರನ್ನು ಕೊಲ್ಲಲು ಸಿದ್ಧರಾಗಿ’ ಎಂದು ರಾಜ ಪಟೇರಿಯ ನೀಡಿರುವ ಹೇಳಿಕೆ ಕಾಂಗ್ರೆಸ್ಸಿಗರ ಕೆಟ್ಟ ಮನಸ್ಥಿತಿಗೆ ಸಾಕ್ಷಿಯಾಗಿದೆ. ಈ ಮೂಲಕ ಪ್ರಧಾನಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಕಾಂಗ್ರೆಸ್ ಮುಂದಾಗಿದೆ ಎಂದು ಪ್ರತಿಭಟನಕಾರರು ದೂರಿದರು.

ಪ್ರಧಾನಿ ವಿರುದ್ಧ ಹೇಳಿಕೆ ನೀಡಿರುವ ವ್ಯಕ್ತಿಯನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.

ಬಿಜೆಪಿಯ ಪ್ರಮುಖರಾದ ಕೆ.ಆರ್. ಗಣೇಶ್ ಪ್ರಸಾದ್, ಮಧುರಾ ಶಿವಾನಂದ್, ಸವಿತಾ ವಾಸು, ದೇವೇಂದ್ರಪ್ಪ, ಮೈತ್ರಿ ಪಾಟೀಲ್, ಸುಧಾ ಉದಯ್, ಸರೋಜ ಭಂಡಾರಿ, ಬಿ.ಎಚ್. ಲಿಂಗರಾಜ್, ವಿನೋದ್ ರಾಜ್, ಸಂತೋಷ್ ಆರ್.ಶೇಟ್, ಸತೀಶ್ ಕೆ. ರತ್ನಾಕರ್ ಶೇಟ್, ಮಹೇಶ್ ಎಂ.ಆರ್. ಕೃಷ್ಣಶೇಟ್ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT