ಶನಿವಾರ, 2 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಜುನಾಥಗೌಡ ಮನೆ ಮೇಲೆ ಇ.ಡಿ ದಾಳಿ: ಜನಪರ ಸಮಿತಿ ಖಂಡನೆ

Published 6 ಅಕ್ಟೋಬರ್ 2023, 16:26 IST
Last Updated 6 ಅಕ್ಟೋಬರ್ 2023, 16:26 IST
ಅಕ್ಷರ ಗಾತ್ರ

ಶಿವಮೊಗ್ಗ: ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ಮಾಡಿರುವುದನ್ನು ಖಂಡಿಸಿ ಜನಪರ ಹೋರಾಟ ಸಮಿತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಮಂಜುನಾಥ ಗೌಡರ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿರುವ ಕ್ರಮ ರಾಜಕೀಯ ಪ್ರೇರಿತ. ಗೌಡ ಅವರು ಕಾಂಗ್ರೆಸ್ ಮುಖಂಡರಾಗಿದ್ದು, ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಈ ದಾಳಿ ಖಂಡನೀಯ ಎಂದು ಸಮಿತಿಯ ಸದಸ್ಯರು ತಿಳಿಸಿದರು.

‘ಮಂಜುನಾಥ ಗೌಡರು ಆರು ಬಾರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ. ಡಿಸಿಸಿ ಬ್ಯಾಂಕಿನಲ್ಲಿ ಈ ಹಿಂದೆ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅವರನ್ನು ಆರೋಪಿಯನ್ನಾಗಿಸಲಾಗಿತ್ತು. ಸಿಐಡಿ ತನಿಖೆ ಕೂಡ ಮಾಡಲಾಗಿತ್ತು. ಆದರೆ ತನಿಖೆಯಲ್ಲಿ ಅವರ ಪಾತ್ರ ಇಲ್ಲ ಎಂದು ಹೇಳಲಾಗಿದೆ. ಅವರು ಮತ್ತೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ಇವರ ಏಳಿಗೆ ಸಹಿಸದ ಕೆಲವರು ರಾಜಕೀಯ ಪ್ರೇರಿತವಾಗಿ ಈ ದಾಳಿ ನಡೆಸಲು ಕುಮ್ಮಕ್ಕು ನೀಡಿದ್ದಾರೆ’ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ನಾಗರಾಜ್ ಕಂಕಾರಿ, ಎಚ್.ಪಾಲಾಕ್ಷಿ, ಎನ್.ಎಸ್.ಮಹೇಶ್, ಗಾಡಿಕೊಪ್ಪ ರಾಜಣ್ಣ, ಅನಿಲ್‌ಕುಮಾರ್, ಆನಂದ್, ಉಮೇಶ್, ಭಾಸ್ಕರ್. ಶಾಮು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT