ವೈಷಮ್ಯ: ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಹತ್ಯೆ
ಶಿವಮೊಗ್ಗ: ಇಲ್ಲಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಶನಿವಾರ ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಕುಶನ್ ಚಂದು (29) ಕೊಲೆಯಾದವರು. ಕುಶನ್ ಚಂದು ಹಾಗೂ ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿರುವ ಪರಶುರಾಮ ಮಧ್ಯೆ ಕೆಲ ವಿಚಾರಗಳಿಗೆ ದ್ವೇಷ ಬೆಳೆದಿತ್ತು. ಇದೇ ಕಾರಣಕ್ಕೆ ಕೊಲೆ ಮಾಡಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.