ಮಂಗಳವಾರ, ಡಿಸೆಂಬರ್ 7, 2021
19 °C

ನಳಿನ್ ಕುಮಾರ್ ಕಟೀಲ್ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ್‌ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಇಲ್ಲಿನ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ನಳಿನ್ ಕುಮಾರ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ತಾಲ್ಲೂಕು ಪಂಚಾಯಿತಿ ಸದಸ್ಯ ಬಿ.ಜಿ. ಚಂದ್ರಮೌಳಿ ಗೌಡ ಮಾತನಾಡಿ, ‘ರಾಜಕೀಯವಾಗಿ ಎತ್ತರ ಸ್ಥಾನದಲ್ಲಿರುವವರು ಅರಿತು ಮಾತನಾಡಬೇಕು. ಕೇವಲ ಬಾಯಿ ಚಪಲಕ್ಕೆ ಮಾತನಾಡಿದರೆ ಜನ ದಂಗೆ ಏಳುತ್ತಾರೆ. ಕಟೀಲ್ ಅವಿವೇಕಿಯಂತೆ ಹೇಳಿಕೆ ನೀಡಿದ್ದಾರೆ. ಇದು ಅವರ ಮನಸ್ಥಿತಿಯನ್ನು ಪ್ರದರ್ಶಿಸುತ್ತದೆ. ಕೂಡಲೇ ಕಟೀಲ್ ತಮ್ಮ ಹೇಳಿಕೆ ಹಿಂಪಡೆಯಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ನಾಗರಾಜ್, ಪ್ರಮುಖರಾದ ಏರಿಗೆ ಉಮೇಶ್ ಮಾತನಾಡಿದರು.

ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಸದಾಶಿವ ಶ್ರೇಷ್ಠಿ, ಪಟ್ಟಣ ಪಂಚಾಯಿತಿ ಸದಸ್ಯ ಅಶ್ವಿನಿ, ಸಣ್ಣಕ್ಕಿ ಮಂಜು, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪ್ರಭಾಕರ್ ರಾವ್, ಎಚ್. ಮಂಬಾರು ಟೀಕಪ್ಪ, ಮಹಾಬಲರಾವ್, ಕೋಡೂರು ವೇದಾಂತಪ್ಪ ಗೌಡ, ಮಂಜುನಾಥ್, ಬೃಂದಾವನ ಪ್ರವೀಣ್, ಸುಧಾ, ಮಹೇಂದ್ರ, ನಾಸೀರ್, ಕೃಷ್ಣಮೂರ್ತಿ, ಚಂದ್ರಮೂರ್ತಿ, ಇಕ್ಬಾಲ್, ಅಣ್ಣಪ್ಪ, ರಾಜು, ಟೀಕಪ್ಪ, ಜಯನಗರ ಗುರು, ಉಬೇದುಲ್ಲ, ಚೇತನ್‌ ದಾಸ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು